August 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ – ಗೂಡ್ಸ್ ಲಾರಿ ಢಿಕ್ಕಿ ಹೊಡೆದು ದೇಹದಿಂದ ಬೇರ್ಪಟ್ಟ ರುಂಡ

ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಗೂಡ್ಸ್ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಇಂದು ಜನವರಿ 25ರಂದು ಶನಿವಾರ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಗೂಡ್ಸ್ ಲಾರಿಯೊಂದು ಮಹಿಳೆಯ ದೇಹದಿಂದ ರುಂಡವನ್ನು ಬೇರ್ಪಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಲಾರಿಯ ಪತ್ತೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ.

You may also like

News

ಸೆಪ್ಟೆಂಬರ್ 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬಾಕಿ ಉಳಿದಿರುವ ರಾಜಿಯಾಗಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ
News

27 ವರ್ಷಗಳ ಸೇವೆಯ ಬಳಿಕ ಜೀವನ್ ಸಂತೋಷ್ ಮಾರ್ಟಿಸ್‌ ಅವರು KSRTC ಟ್ರಾಫಿಕ್ ಕಂಟ್ರೋಲರ್ ಹುದ್ದೆಗೆ ಬಡ್ತಿ

KSRTC ಪುತ್ತೂರು ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾರ್ಟಿಸ್ ಕುಟುಂಬದ ಜೀವನ್ ಸಂತೋಷ್ ಮಾರ್ಟಿಸ್ ಅವರು ಟ್ರಾಫಿಕ್ ಕಂಟ್ರೋಲರ್ (ಸಂಚಾರ ನಿಯಂತ್ರಕ)

You cannot copy content of this page