August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇಂದ್ರೀಯ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ಕಾಸರಗೋಡಿನಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯವು 2025ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ವಿಶ್ವವಿದ್ಯಾಲಯದ ಜಾಲತಾಣದ ಮೂಲಕ ಆನ್ ಲೈನ್ ನಲ್ಲಿ ಇದೇ ಫೆಬ್ರವರಿ 01 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಎಂ.ಎ., ಇತರ ಭಾಷಾ ವಿಷಯಗಳು ಸೇರಿದಂತೆ ಮಾನವಿಕ ಶಾಸ್ತ್ರಗಳು, ವಿಜ್ಞಾನ, ವಾಣಿಜ್ಯ, ಸಮಾಜಕಾರ್ಯ, ಹೀಗೆ ಅನೇಕ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Online ಮೂಲಕ ಸಲ್ಲಿಸಲಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದಲ್ಲಿ ಆಯ್ಕೆ ಪ್ರಕ್ರೀಯೆ ನಡೆಯಲಿದೆ. ಭಾಷಾ ಪ್ರಶ್ನೆಪತ್ರಿಕೆಗಳು ಹೊರತುಪಡಿಸಿ ಉಳಿದ ಎಲ್ಲ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಇರಲಿದೆ. ಕೋರ್ಸ್ ಗಳು, ಪ್ರವೇಶ ಪರೀಕ್ಷೆ ಮತ್ತಿತರ ವಿವರಗಳಿಗಾಗಿ www.Cukerala.ac.inwww.nta.ac.in  ಜಾಲತಾಣಗಳಿಗೆ ಭೇಟಿ ನೀಡಬಹುದು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page