November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಸಂಪೂರ್ಣ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬಂಟ್ವಾಳ: ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣಗೊಳ್ಳಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಜನವರಿ 30ರಂದು ಗುರುವಾರ ಬಿ.ಸಿ. ರೋಡಿನಿಂದ ಉಪ್ಪಿನಂಗಡಿ ತನಕದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಅವರು ಬಿ.ಸಿ. ರೋಡಿನಿಂದ ಪೆರಿಯಶಾಂತಿವರೆಗೆ ಸುಮಾರು 45 ಕಿ.ಮೀ. ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಮಳೆಗಾಲದ ಮೊದಲು ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಭರವಸೆಯನ್ನು ಗುತ್ತಿಗೆ ಕಂಪೆನಿ ನೀಡಿದೆ. ಬ್ಲಾಸ್ಟಿಂಗ್ ಸಮಸ್ಯೆ ಇರುವ ಕಡೆ ಮಾತ್ರ ಕಾಮಗಾರಿ ಒಂದಷ್ಟು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದೆಲ್ಲಾ ಕಡೆ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಅವರು ತಿಳಿಸಿದರು.

ಆರಂಭದಲ್ಲಿ ಬಿ.ಸಿ. ರೋಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ ಬಿಲ್ಲವ ಸಂಘದ ಪ್ರಮುಖರು ವೃತ್ತದ ಸುತ್ತ ಜಾಗವನ್ನು ಅಗಲೀಕರಣಗೊಳಿಸಿ, ವೃತ್ತದ ಸೌಂದರ್ಯವನ್ನು ಇನ್ನಷ್ಟು ಹೆಚ್ಚು ಮಾಡುವಂತೆ ಮನವಿ ಮಾಡಿದರು.

ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೆರಮೊಗ್ರು, ಉಪ್ಪಿನಂಗಡಿ ಹಾಗೂ ಸುಬ್ರಹ್ಮಣ್ಯ ಕ್ರಾಸ್ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಪೈ ಓವರ್ ಕಾಮಗಾರಿ ವೀಕ್ಷಿಸಿದರು.

ಮೆಲ್ಕಾರ್ ಸಮೀಪದ ನರಹರಿ ಹಾಗೂ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ತಡೆಗೋಡೆ ಹಾಗೂ ಬ್ಲಾಸ್ಟಿಂಗ್ ಸಮಸ್ಯೆ ಇದ್ದು ರಸ್ತೆಯ ಕಾಮಗಾರಿಯನ್ನು ಪೂರ್ತಿಗೊಳಿಸುವಲ್ಲಿ ತುಸು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದಂತೆ ಎಲ್ಲೂ ಕೂಡ ರಸ್ತೆ ನಿರ್ಮಾಣಕ್ಕೆ ಅಡೆತಡೆಗಳಿಲ್ಲ. ಹೆದ್ದಾರಿ ನಿರ್ಮಾಣದ ವೇಳೆ ಕೆಲವು ಕಡೆಗಳಲ್ಲಿ ರಸ್ತೆ ಸಮಸ್ಯೆ, ಮಳೆಗಾಲದಲ್ಲಿ ಜಮೀನಿಗೆ ನೀರು ನುಗ್ಗುವ ಸಮಸ್ಯೆ, ಕ್ರಾಸಿಂಗ್ ಹೀಗೆ ಇನ್ನಿತರ ಸಣ್ಣಪುಟ್ಟ ವ್ಯತ್ಯಾಸಗಳು ಇವೆ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page