ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನ ಆಚರಣೆ

ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರೂ ಯುವ ಕೇಂದ್ರ ಮಂಗಳೂರು, ಮಂಗಳೂರು ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಚಿತ್ತಾರ ಮಹಿಳಾ ಮಂಡಳಿ ಆಳಪೆ ಪಡೀಲ್ ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 30ರಂದು ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಚರಿಸಲಾಯಿತು.
ಅಧ್ಯಕ್ಷತೆಯನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಳರವರು ವಹಿಸಿದ್ದರು. ವೇದಿಕೆಯಲ್ಲಿ ಅತಿಥಿಗಳಾಗಿ ನೆಹರೂ ಯುವ ಕೇಂದ್ರದ ಅಧಿಕಾರಿ ಜಗದೀಶ್, ಕ್ರೀಡಾ ಸಚಿವಾಲಯದ ಅಧಿಕಾರಿ ಪ್ರದೀಪ್ ಡಿಸೋಜಾ, NSS ಅಧಿಕಾರಿ ಉದಯಕುಮಾರ್ ಹಾಗೂ Dr ಸುಮನಾರವರು, ಚಿತ್ತಾರ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಿ ಫೆರ್ನಾಂಡಿಸ್ ಹಾಗೂ ಬಲ್ಮಠ ಮಹಿಳಾ ಕಾಲೇಜಿನ ಚಂದ್ರಿಕಾರವರು ಉಪಸ್ಥಿತರಿದ್ದರು.
NYK ಅಧಿಕಾರಿ ಜಗದೀಶರವರು ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ MSW ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಎಲ್ಲಾ ಅತಿಥಿಗಳು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾಂಜಲಿಗೈದರು ಹಾಗೂ ಹುತಾತ್ಮರಾದ ಎಲ್ಲರಿಗೆ ಗೌರವವನ್ನು ಸಲ್ಲಿಸಲಾಯಿತು. NYK ಯುವ ಕ್ರೀಡಾ ನಾಯಕಿಯಾದ ನಮಿತಾರವರು ಧನ್ಯವಾದ ನೀಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.