ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ವಿರುದ್ಧ ಇನ್ನೊಂದು ಎಫ್.ಐ.ಆರ್. ದಾಖಲು

ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಬಂಧನದಲ್ಲಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಇನ್ನೊಂದು FIR ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು RTI ಕಾರ್ಯಕರ್ತ ಗಂಗರಾಜು ಅವರಿಗೆ ಶಕ್ತಿ ತುಂಬಲು ಪ್ರಾಣಿ ಬಲಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಂದು FIR ದಾಖಲಾಗಿದೆ.
ಮಸಾಜ್ ಪಾರ್ಲರ್ ಮೇಲೆ ದಾಳಿ ಸಂಬಂಧ ರಾಮ್ ಸೇನೆ ಮುಖಂಡ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರ ಮೊಬೈಲ್ ಪರಿಶೀಲನೆ ನಡೆಸಿದಾಗ ಅದರಲ್ಲಿ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು RTI ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ.