April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿರೌಡಿಯ ಕಾಲಿಗೆ ಗುಂಡೇಟು, ಬಂಧನ

ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ 23ವರ್ಷ ಪ್ರಾಯದ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.

ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಹಾಸನ ನಗರ ಠಾಣೆ ಇನ್ಸ್‌ಪೆಕ್ಟರ್ ಮೋಹನ್‌ ಕೃಷ್ಣ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಜನವರಿ 29ರಂದು‌ ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು.

ಈ ಸಂದರ್ಭದಲ್ಲಿ KA51 MV 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.

ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ‌ಪ್ರಯಾಣ ಮಾಡುವವರು ಏನು ಮಾಡಬೇಕು ಎಂದು ನೆಟ್ಟಿಗರು ಪೊಲೀಸರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page