ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಮಿಲಾಗ್ರಿಸ್ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಫೆಬ್ರವರಿ 4ರಂದು ಮಂಗಳವಾರ ಮಿಲಾಗ್ರಿಸ್ ಕಾಲೇಜು ಆಫ್ ನರ್ಸಿಂಗ್ ಇದರ ಪ್ರಥಮ ವರ್ಷದ 35 ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು. ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ಮನುಷ್ಯನನ್ನು ಶತ್ರುವಾಗಿ ಕಾಡುವ ಕ್ಯಾನ್ಸರ್ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ.
ವಿದ್ಯಾರ್ಥಿಗಳು ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ಕಾರಣಗಳು, ಅದರ ಎಚ್ಚರಿಕೆಯ ಚಿಹ್ನೆಗಳು ಹಾಗೂ ಅದನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ , ತಂಬಾಕು ಸೇವನೆಯಿಂದ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ನಿಯಂತ್ರಿಸುವ ಕುರಿತು ಮಾಹಿತಿ ನೀಡಿದರು.
ಇದೇ ನಾಟಕವನ್ನು ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಗೆ ಫಾರಂ ಮಾಲ್ ನಲ್ಲಿ
ಪ್ರದರ್ಶಿಸಲಾಗುತ್ತದೆ. ಕಾಲೇಜಿನ ನಿರ್ದೇಶಕ ವಂದನೀಯ ಫಾದರ್ ಬೊನವೆಂಚರ್ ನಜ್ರೆತ್ ಕಾಲೇಜಿನ ಪ್ರಾಂಶುಪಾಲೆ ಡಾ. ಡಯಾನ ಲೋಬೋ ಹಾಗೂ ಇತರ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.