September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೆಬ್ರವರಿ 9ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆಬ್ರವರಿ 9ರಂದು ಆದಿತ್ಯವಾರ ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್‌ ಗೇಟ್ ಬಳಿಯ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ  ಪ್ರಶಸ್ತಿಗೆ ಆಯ್ಕೆಯಾಗಿರುವ ಮಹಾ ನಗರ ಪಾಲಿಕೆ ಕಾರ್ಪೋರೇಟರ್ ಗಣೇಶ್ ಕುಲಾಲ್ ಇವರಿಗೆ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಅವರು ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page