ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷ

ಎಂಟು ಲಕ್ಷಕ್ಕೆ ಬೇಡಿಕೆ – ಒಂದು ಲಕ್ಷ ಎಡ್ವಾನ್ಸ್
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ.
ರೂಪಾಯಿ 1 ಲಕ್ಷ ಪಡೆಯುವಾಗ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಎಂಬುವವನು ಲಂಚ ತೆಗೆದುಕೊಂಡ ಹಣದ ಜೊತೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.
ಮನೋಹರ್ ಅರಸ್, ಮಾಗನೂರು ಗ್ರಾಮದ ನಿವಾಸಿ ಶಂಕರ್ ಅವರ ಬಳಿ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ದೂರುದಾರ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ್ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡದಿರಲು 8 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಅಂತೆಯೇ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ಲಂಚ ತೆಗೆದುಕೊಂಡ ಹಣದ ಜೊತೆ ಬಿದ್ದಿದ್ದಾನೆ. ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್ ನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.