ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ

ಬೆಳ್ತಂಗಡಿ : ಅರಮಲೆಬೆಟ್ಟ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಅದ್ಭುತ ಕೆಲಸವಾಗಿದ್ದು, ಉತ್ತಮ ವ್ಯವಸ್ಥೆಯನ್ನು ಭಕ್ತರ ಸಹಕಾರದಲ್ಲಿ ಆಡಳಿತ ಮಂಡಳಿ ಮಾಡಿದೆ. ಬಹಳಷ್ಟು ಕಾಮಗಾರಿ ನಡೆದಿದ್ದು ಕೊಡಮಣಿತ್ತಾಯ ದೈವದ ಸಂಪೂರ್ಣ ಆಶೀರ್ವಾದ ಕಡಂಬು ಮನೆತನದವರಿಗೆ ಮತ್ತು ಊರಿನ ಜನರಿಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಅವರು ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಉಗ್ರಾಣ ಮುಹೂರ್ತ ನೆರವೇರಿಸಿದರು. ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಿ, ದೈವಸ್ಥಾನಗಳಲ್ಲಿ ಕಟ್ಟುಕಟ್ಟಲೆ ಸಂಪ್ರದಾಯ ಪ್ರಕಾರ ನಡೆಯಬೇಕು. ಇದರಲ್ಲಿ ಯಾವುದೇ ವ್ಯತ್ಯಾಸ ಆದರೂ ಅದು ನಮ್ಮ ಸಂಸ್ಕೃತಿಗೆ ಧಕ್ಕೆಯಾಗುತ್ತದೆ ಎಂದರು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ, ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರಬೀಡು, ಎಸ್. ಗಂಗಾಧರ ರಾವ್ ಕೆವುಡೇಲು, ಉದ್ಯಮಿ ಸಂಪತ್ ಕುಮಾರ್ ಜೈನ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ವೈ. ನಾಣ್ಯಪ್ಪ ಪೂಜಾರಿ, ಉದ್ಯಮಿ ವಿನಯಚಂದ್ರ, ಸತೀಶ್ ಶೆಟ್ಟಿ ದೊಡ್ಡಮನೆ, ಶಮಂತ್ ಕುಮಾರ್ ಜೈನ್ ಕಲೆಂಜಿರೋಡಿ, ಉದ್ಯಮಿ ಸೀತಾರಾಮ ಶೆಟ್ಟಿ, ರಾಮಕೃಷ್ಣ ನಾಯಕ್ ಗುರುವಾಯನಕೆರೆ, ಸುಭಾಶ್ಚಂದ್ರ ಜೈನ್ ಭಾಗವಹಿಸಿದ್ದರು.
ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಜಯಶ್ರೀ ಪ್ರಾರ್ಥಿಸಿದರು, ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ನವಶಕ್ತಿ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್ ವಂದಿಸಿದರು.