ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್, ಪವನ್ ಸಾಲ್ಯಾನ್ ಕೊಲ್ಲಾಜೆ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಎಸ್.ಕೆ. ಹಕೀಂ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ವಿವಿಧ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನವರಾದ ಅಭಿನಂದನ್ ಹರೀಶ್ ಕುಮಾರ್ ಮತ್ತು ಪವನ್ ಸಾಲ್ಯಾನ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್.ಕೆ. ಹಕೀಂ ಕೊಕ್ಕಡ ಇವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯರಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತು ನಮಿತಾ ಹರೀಶ್ ಕುಮಾರ್ ದಂಪತಿಗಳ ಪುತ್ರರಾದ ಅಭಿನಂದನ್ ರವರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇರಿದಂತೆ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ.
ಬಂದಾರು ಗ್ರಾಮದ ಕೊಲ್ಲಾಜೆ ನಿವಾಸಿ ವಿಶ್ವನಾಥ ಮತ್ತು ಸುಚಿತ್ರಾ ವಿಶ್ವನಾಥ್ ಕೊಲ್ಲಾಜೆ ದಂಪತಿಯ ಪುತ್ರರಾಗಿರುವ ಪವನ್ ಸಾಲ್ಯಾನ್ ಕೊಲ್ಲಾಜೆ ಬೆಳ್ತಂಗಡಿ ಎನ್.ಯು.ಐ. ಅಧ್ಯಕ್ಷರಾಗಿ, ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ, ರಾಜ್ಯ ಎನ್.ಎಸ್.ಯು.ಐ. ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಎಸ್.ಕೆ. ಹಕೀಂ ಕೊಕ್ಕಡ ರವರು ಯೂಸುಫ್ ಕೆರೆಮೂಲೆ ಮತ್ತು ಆಮಿನಾ ದಂಪತಿಗಳ ಪುತ್ರರಾಗಿದ್ದು ಕೊಕ್ಕಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಬೆಳ್ತಂಗಡಿ ಗ್ರಾಮೀಣ ಯುವ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಸದಸ್ಯರಾಗಿದ್ದಾರೆ.