September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ED ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣದ ಆರೋಪಿಗಳ ಸೆರೆ

ಜನವರಿ 3ರಂದು ರಾತ್ರಿ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ED ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂಪಾಯಿ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್‌ ಫೆರ್ನಾಂಡಿಸ್‌ (49), ಸಚ್ಚಿನ್‌ ಟಿ.ಎಸ್‌. (29) ಹಾಗೂ ಶಬಿನ್‌ ಎಸ್‌. (27) ಎಂಬವರನ್ನು ಈ ಮೊದಲೇ ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾರೆ.

ತನಿಖೆ ಮುಂದುವರಿಸಲಾಗಿ, ಫೆಬ್ರವರಿ 15ರಂದು ಶನಿವಾರ ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್‌ (37) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿ, ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್‌ ಇಕ್ಬಾಲ್‌ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್‌ ಅನ್ಸಾರ್‌ (27) ಎಂಬವರನ್ನು ದಸ್ತಗಿರಿ ಮಾಡಿರುವುದಾಗಿದೆ. ಸದ್ರಿ ಪ್ರಕರಣದ ತನಿಖೆ‌ ಮುಂದುವರಿದಂತೆ, ದರೋಡೆ ಕೃತ್ಯಕ್ಕೆ   ಮೂಲ ಸೂತ್ರದಾರನಾದ ಕೇರಳದ ಶಫೀರ್‌ ಬಾಬು (48) ಎಂಬಾತನನ್ನು ಬಂಧಿಸಿದ್ದು, ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್‌ ಠಾಣೆ ಸಹಾಯಕ ಪೊಲೀಸ್‌ ಉಪ ನಿರೀಕ್ಷಕನಾಗಿರುವುದಾಗಿದೆ.

 ಸದ್ರಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್., IPS ಇವರ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿರುತ್ತದೆ.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page