November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SSLC ಮತ್ತು PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷಾ ಸಮಯದಲ್ಲಿ KSRTC ಬಸ್ ಪ್ರಯಾಣ ಉಚಿತ

ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ನೀಡಿದ ಕೊಡುಗೆ

ಬೆಂಗಳೂರು : ದ್ವಿತೀಯ PUC ಹಾಗೂ SSLC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ KSRTC ಬಸ್ ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಾರ್ಚ್ 01ರಿಂದ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ.

ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು, ಕರಾರಸಾ ನಿಗಮ ಬೆಂಗಳೂರುರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ.

ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:21.03.2025 ರಿಂದ 04.04.2025 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಹಾಗೂ” ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೆಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

 

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page