September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇರಳಕಟ್ಟೆಯ ನರ್ಸಿಂಗ್ ಕಾಲೇಜ್ ಒಂದರಲ್ಲಿ ಚಡ್ಡಿ ಬಿಚ್ಚುವಂತೆ ವಿದ್ಯಾರ್ಥಿಗೆ ರ್‍ಯಾಗಿಂಗ್

ಬೆಚ್ಚಿ ಬೀಳಿಸುವ ತೀವ್ರ ಅಮಾನುಷ ಘಟನೆ

ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿರುವ ಪ್ರತಿಷ್ಠಿತ ಕಾಲೆಜೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿಯೋರ್ವನಿಗೆ ಹಿರಿಯ ವಿದ್ಯಾರ್ಥಿಗಳು ಸೇರಿ ರ್‍ಯಾಗಿಂಗ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿದೆ. ನರ್ಸಿಂಗ್ ವಿದ್ಯಾರ್ಥಿಯನ್ನು ಡ್ಯಾನ್ಸ್ ಮಾಡಲು ಹೇಳಿದ ಹಿರಿಯ ವಿದ್ಯಾರ್ಥಿಗಳು ಬಳಿಕ ಚಡ್ಡಿ ಬಿಚ್ಚುವಂತೆ ಹೇಳಿ ತೀರಾ ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ರ್‍ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಹಾಗೂ ಕಾಲೇಜಿನ ಕೆಲ ವಿದ್ಯಾರ್ಥಿಗಳು ಸೇರಿ ದೂರು ನೀಡಿದ್ದಾರೆ. ಇದಾದ ಬಳಿಕ ರ್‍ಯಾಗಿಂಗ್ ಮಾಡಿದ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆಸಿಕೊಂಡಿದ್ದಾರೆ. ಪೊಲೀಸರು ರ್‍ಯಾಗಿಂಗ್ ಮಾಡಿದ ವಿದ್ಯಾರ್ಥಿಗಳನ್ನ ಸರಿಯಾಗಿ ಬೆಂಡೆತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜಿನಲ್ಲಿ ಚಡ್ಡಿ ತೆಗೆಯುವಂತೆ ಹೇಳಿದ ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಯಲ್ಲಿ ಚಡ್ಡಿಯಲ್ಲಿ ಕುಳ್ಳಿರಿಸಲಾಗಿದೆ ಎಂದು ತಿಳಿದುಬಂದಿದೆ. ರ್‍ಯಾಗಿಂಗ್ ಗೆ ಒಳಗಾದ ನರ್ಸಿಂಗ್ ವಿದ್ಯಾರ್ಥಿಯ ಸಂಬಂಧಿಕರೋರ್ವರು ಪೊಲೀಸ್ ಅಧಿಕಾರಿಯಾಗಿದ್ದಾರೆ.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page