March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರು-ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

ಬೆಂಗಳೂರು ಮತ್ತು ಮಂಗಳೂರು ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.

ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ NHAI ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.  ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಸಂಪರ್ಕಕ್ಕೆ ಮೂರು ಪ್ರಮುಖ ಮಾರ್ಗಗಳಿವೆ. ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಇಳಿಯಬೇಕಾಗುತ್ತದೆ. ಈ ಪೈಕಿ ಹಾಸನ ಶಿರಾಡಿ ಘಾಟಿ ಬಹಳ ಹತ್ತಿರದ ಮಾರ್ಗವಾಗಿದೆ. ಆದರೆ ಮಳೆಗಾಲದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದರೆ ರಸ್ತೆ ಸಂಚಾರ ದುಸ್ತರವಾಗುತ್ತದೆ. ಈ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲು ಸರ್ಕಾರಗಳು ಮುಂದಾಗಿವೆ.

ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page