May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಲಕ ನಾಪತ್ತೆ ಪ್ರಕರಣ – ಮಾರ್ಚ್ 1ರಂದು ಶನಿವಾರ ಫರಂಗಿಪೇಟೆ ಬಂದ್ ಗೆ ಕರೆ

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಎಡಿಷನಲ್ ಎಸ್ಪಿ ರಾಜೇಂದ್ರ ಅವರ ಜೊತೆ ಪ್ರತಿಭಟನಕಾರರು ಮಾತುಕತೆ ನಡೆಸಿದರು.

ಬಳಿಕ ಫರಂಗಿಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿ ಮಾರ್ಚ್ 1ರಂದು ಶನಿವಾರ ಬೆಳಗ್ಗಿನಿಂದ ಫರಂಗಿಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಗೊಳಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಈ ಪ್ರತಿಭಟನೆ ಯಶಸ್ವಿಯಾಗಲು ಎಲ್ಲಾ ಸಂಘ ಸಂಸ್ಥೆಗಳು, ಸ್ಥಳೀಯ ಆರು ಗ್ರಾಮಗಳ ಗ್ರಾಮಸ್ಥರು, ವ್ಯಾಪಾರಿಗಳು, ಸಹಕಾರ ನೀಡುವಂತೆ ಕೋರಲಾಯಿತು.

ಈ ಸಂದರ್ಭ ಪ್ರಮುಖರಾದ ಭರತ್ ಕುಮ್ಡೇಲು, ಉಮೇಶ್ ಶೆಟ್ಟಿ ಬರ್ಕೆ, ಪ್ರಸಾದ್ ಕುಮಾರ್, ಮನೋಜ್ ಆಚಾರ್ಯ ನಾಣ್ಯ, ಪದ್ಮನಾಭ ಶೆಟ್ಟಿ ಕಿದೆಬೆಟ್ಟು, ಧನರಾಜ್, ಚಂದ್ರಶೇಖರ ಗಾಂಭೀರ ಮತ್ತಿತರರು ಉಪಸ್ಥಿತರಿದ್ದರು.

 

ಬಾಲಕ ದಿಗಂತ್ ನಾಪತ್ತೆ

ಮಂಗಳೂರಿನ ಕಪಿತಾನಿಯೋ ಕಾಲೇಜಿನಲ್ಲಿ  ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ 17ವರ್ಷ ಪ್ರಾಯದ ದಿಗಂತ್ ಫೆಬ್ರವರಿ 25ರಂದು ಸಂಜೆ ಆಂಜನೇಯ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಳಿಕ ನಾಪತ್ತೆಯಾಗಿದ್ದ. ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ಮನೆ ಸಮೀಪದ ರೈಲ್ವೇ ಹಳಿಯಲ್ಲಿ ಬಿದ್ದು ಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಬಾಲಕನ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿರುವ ಕಾರಣ ಹೊರ ಠಾಣೆಗೆ ಮುತ್ತಿಗೆ ಹಾಕಿರುವುದಾಗಿ ಪ್ರತಿಭಟನಕಾರರು ತಿಳಿಸಿದ್ದಾರೆ.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page