September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿ.ಸಿ. ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ  ಆಮಂತ್ರಣ ಪತ್ರಿಕೆ ಬಿಡುಗಡೆ – ಬಾಲಾಯ ಪ್ರತಿಷ್ಠೆ

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಎಪ್ರಿಲ್ 4ರಿಂದ 9 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಮಾರ್ಚ್ 1ರಂದು ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.


ಕ್ಷೇತ್ರದ ತಂತ್ರಿಯವರಾದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರೇಣ್ಯರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ, ತುಳುನಾಡಿನಲ್ಲಿ ಜನರ ಜೀವನದಲ್ಲಿ ಬ್ರಹ್ಮಕಲಾಶಾ ಕಾರ್ಯಕ್ರಮಗಳು ಆಧ್ಯಾತ್ಮಿಕವಾಗಿ, ಭೌತಿಕವಾಗಿ, ದೈವಿಕವಾಗಿ ಹಾಸು ಹೊಕ್ಕಿದೆ. ದೇವಸ್ಥಾನಗಳಿಂದ ಕಲೆ, ಸಂಸ್ಕೃತಿಗಳಿಗೆ ಉತ್ತೇಜನ ದೊರಕುತ್ತದೆ. ಭಾರತೀಯ ಸನಾತನ ಸಂಸ್ಕೃತಿಯನ್ನು ಅರಿತು ಬಾಳ ಬೇಕು ಎಂದರು. ತನ್ನ ಮೇಲೆ ಮತ್ತು ದೇವರ ಮೇಲೆ ನಂಬಿಕೆ ಇರಿಸಿದಾಗ ಯಾವುದೇ ಸಾಧನೆ ಮಾಡಲು ಸಾಧ್ಯ. ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ಇಂದು ಪ್ರಪಂಚ ಶಾಂತಿಗಾಗಿ, ಆಧ್ಯಾತ್ಮಿಕತೆಗಾಗಿ ನಮ್ಮ ದೇಶದತ್ತ ನೋಡುತ್ತಿದೆ. ಆದುದರಿಂದ ನಿರಂತರ ಚಿಂತನೆಯುಳ್ಳ, ಕ್ರಿಯಾಶೀಲವಾದ ಸನಾತನವಾದ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ದೇವಸ್ಥಾನಗಳ ಅಭಿವೃದ್ಧಿಗಾಗಿ ಕೈ ಜೋಡಿಸಬೇಕು. ದೇವರ ಅನುಗ್ರಹದಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗಲಿ ಎಂದು ನುಡಿದರು.


ಬ್ರಹ್ಮಕಲಶೋತ್ಸವ ಸಮಿತಿ ಅದ್ಯಕ್ಷ ಡಾ. ರಮೇಶಾನಂದ ಸೋಮಯಾಜಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಹ್ಮಕಲಶೋತ್ಸವಕ್ಕೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಹೇಳಿದರು. ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಸಮಿತಿ ಸಹ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಅವರು ಶುಭ ಹಾರೈಸಿದರು.
ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ. ವಿಶ್ವನಾಥ, ಬ್ರಹ್ಮ ಕಲಶೋತ್ಸವ ಸಮಿತಿ ಕೋಶಾಧಿಕಾರಿ ನಾರಾಯಣ ಹೆಗ್ಡೆ ಅವರು ವೇದಿಕೆಯಲ್ಲಿದ್ದರು. ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಸೇವಾ ಸಮಿತಿ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸಮಿತಿ ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಅವರು ಸ್ವಾಗತಿಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮೋಹನದಾಸ ಕೊಟ್ಟಾರಿ ಹಾಗೂ ಸತೀಶ್ ಶೆಟ್ಟಿ ಮೊಡಂಕಾಪು ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಂತ್ರಿಯವರ ಹಾಗೂ ಕ್ಷೇತ್ರದ ಪ್ರ. ಅರ್ಚಕ ರಘುಪತಿ ಭಟ್ ಅವರ ಪೌರೋಹಿತ್ಯದಲ್ಲಿ ಬಾಲಾಯ ಪ್ರತಿಷ್ಠೆ ನಡೆಯಿತು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page