March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಂಸಿಸಿ ಬ್ಯಾಂಕ್ ಇದರ 19ನೇ ಶಾಖೆ ಬೆಳ್ಮಣ್ ನಲ್ಲಿ ಇಂದು ಲೋಕಾರ್ಪಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ಇಂದು ಮಾರ್ಚ್ 2ರಂದು ಆದಿತ್ಯವಾರ ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ವಂದನೀಯ ಫಾದರ್ ಫೆಡ್ರಿಕ್ ಮಸ್ಕರೇನಸ್ ಇವರು ದೀಪ ಬೆಳಗಿಸುವ ಮೂಲಕ ನೂತನ ಬ್ಯಾಂಕ್ ಉದ್ಘಾಟಿಸಿದರು.  

ಆಶೀರ್ವಚನದ ಬಳಿಕ ಮಾತನಾಡಿದ ಇವರು, “ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಇಂದು ಉದ್ಘಾಟನೆಗೊಂಡಿದೆ. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋರವರ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ ಬ್ಯಾಂಕ್ ಮನೆಮಾತಾಗಿದೆ. ಬೆಳ್ಮಣ್ ಶಾಖೆಯು ಅದೇ ರೀತಿ ಗ್ರಾಹಕ ಸ್ನೇಹಿಯಾಗಿ ಬೆಳೆದು ಜನರಿಗೆ ವರದಾನವಾಗಲಿ” ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜರವರು, “ವಿಶ್ವಾಸಾರ್ಹತೆಗೆ ಇನ್ನೊಂದು ಹೆಸರೇ ಎಂಸಿಸಿ ಬ್ಯಾಂಕ್. ಈ ಕಾರಣದಿಂದ 113 ವರ್ಷಗಳಿಂದ ಬ್ಯಾಂಕ್ ಗ್ರಾಹಕ ಸೇವೆಯಲ್ಲಿ ಹೆಸರು ಪಡೆದಿದೆ. ಕಳೆದ 10 ವರ್ಷಗಳಲ್ಲಿ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್ ಗೆ ಸರಿಸಮಾನವಾಗಿ ಬೆಳೆದಿದೆ. ಒಂದು ಊರಿಗೆ ಬ್ಯಾಂಕ್ ಬಂತು ಎಂದರೆ ಅದು ಪ್ರಗತಿಗೆ ದಾರಿಯಾಗಿದೆ. ಜನರ ವ್ಯವಹಾರಕ್ಕೆ ಪೂರಕವಾಗಿ ಬ್ಯಾಂಕ್ ಸೇವೆ ಮಾಡಿದಲ್ಲಿ ಜನರು ಬ್ಯಾಂಕ್ ಗೆ ಮತ್ತಷ್ಟು ಹತ್ತಿರವಾಗುತ್ತಾರೆ. ಜನರ ವಿಶ್ವಾಸವನ್ನು ಇದೇ ರೀತಿ ಮುಂದುವರಿಸಿ” ಎಂದರು.

ದೈಜಿ ವರ್ಲ್ಡ್ ವಾಹಿನಿಯ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, “ಎಂಸಿಸಿ ಬ್ಯಾಂಕ್ ನ್ನು ಹಿಂದೆ ಕ್ಯಾಥೋಲಿಕ್ ಸಮುದಾಯದವರು ಆಮ್ಚೆಂ ಬ್ಯಾಂಕ್ ಎಂದು ಕರೆಯುತ್ತಿದ್ದರು. ಆದರೆ ಇಂದು ಇದು ನಮ್ಮೆಲ್ಲರ ಬ್ಯಾಂಕ್ ಆಗಿದೆ. ಇದಕ್ಕೆ ಕಾರಣ ಬ್ಯಾಂಕ್ ನ ಗ್ರಾಹಕ ಸ್ನೇಹಿ ನಿರ್ದೇಶಕರು ಮತ್ತು ಸಿಬ್ಬಂದಿಯ ತಂಡ. ಅನಿಲ್ ಲೋಬೋ ಅವರ ನೇತೃತ್ವದಲ್ಲಿ ಬ್ಯಾಂಕ್ ಯಶಸ್ಸಿನ ದಾರಿಯಲ್ಲಿ ಮುನ್ನಡೆಯುತ್ತಿದೆ. ಅವರಲ್ಲಿನ ನಾಯಕತ್ವ ಗುಣದಿಂದಲೇ ಬ್ಯಾಂಕ್ ಹೊಸ ಹೊಸ ಶಾಖೆಯನ್ನು ಗ್ರಾಮೀಣ ಭಾಗಗಳಲ್ಲಿ ತೆರೆಯುತ್ತಿದೆ. ಈ ಮೂಲಕ ಜನರಿಗೆ ಆರ್ಥಿಕ ವಹಿವಾಟು ನಡೆಸಲು ನೆರವಾಗುತ್ತಿದೆ. ನಗುಮೊಗದ ಸಿಬ್ಬಂದಿಯ ಸೇವೆಯಿಂದ ಜನರಿಗೆ ಆಪ್ತವಾಗಿರುವ ಬ್ಯಾಂಕ್ ಮುಂದೆ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿ ಬೆಳೆಯಲಿ” ಎಂದರು.

ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮಾತನಾಡಿ, “ಬ್ಯಾಂಕ್ ಆಗಮನಕ್ಕೆ ಬೆಳ್ಮಣ್ ನಾಗರಿಕರು ತುಂಬು ಹೃದಯದ ಸ್ವಾಗತ ಕೋರಿದ್ದಾರೆ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬ್ಯಾಂಕ್ ನಲ್ಲಿ ಖಾತೆ ತೆರೆಯುತ್ತಿದ್ದಾರೆ. ನಮ್ಮ ಧ್ಯೇಯ ಬ್ಯಾಂಕ್ ಶಾಖೆಗಳನ್ನು ಹೆಚ್ಚಿಸಿ ಗ್ರಾಹಕರಿಗೆ ನೆರವಾಗುವುದು. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಹಕಸ್ನೇಹಿಯಾಗಿ ಬ್ಯಾಂಕ್ ಕೆಲಸ ಮಾಡಲಿದೆ” ಎಂದರು.

ವೇದಿಕೆಯಲ್ಲಿ ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮೇಶ್ವರಿ ಎಂ. ಶೆಟ್ಟಿ, ಜನರಲ್ ಮೆನೇಜರ್ ಸುನಿಲ್, ಅನಿವಾಸಿ ಉದ್ಯಮಿ ರೋನ್ ರೊಡ್ರಿಗಸ್ ಲಂಡನ್, ಬ್ರ್ಯಾಂಚ್ ಮೆನೇಜರ್ ಶೈನಿ ಲಸ್ರಾದೊ ಮತ್ತಿತರರು ಉಪಸ್ಥಿತರಿದ್ದರು. ಎಲ್ಸನ್ ಕಾರ್ಯಕ್ರಮ ನಿರೂಪಿಸಿದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page