November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರೀಕ್ಷೆಯಲ್ಲಿ ನಕಲು ಆರೋಪ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬಾಗಲಕೋಟೆಯ ಮುಧೋಳ ನಗರದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ 17 ವರ್ಷ ಪ್ರಾಯದ ತೇಜಸ್ವಿನಿ ದೊಡ್ಡಮನಿ ಎಂದು ತಿಳಿದು ಬಂದಿದೆ.

ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೈನ್ಸ್ ಓದುತ್ತಿದ್ದಳು. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ತೇಜಸ್ವಿನಿ ನಕಲು ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಪ್ರಶ್ನೆ ಮಾಡಿದರು ಎಂದು ತಿಳಿದು ಬಂದಿದೆ. ಈ ವಿಚಾರವನ್ನು ತೇಜಸ್ವಿನಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ಪೋಷಕರು ಫೆಬ್ರವರಿ 28ರಂದು ಕಾಲೇಜಿಗೆ ಬಂದು, ನಕಲು ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ಆಗ ಕಾಲೇಜು ಸಿಬ್ಬಂದಿ ಸಿಸಿ ಕ್ಯಾಮರಾ ದೃಶ್ಯ ತೋರಿಸಲು ಮುಂದಾದರು. ಅಲ್ಲದೇ, ಕಾಲೇಜು ಸಿಬ್ಬಂದಿ ಪೋಷಕರ ಮುಂದೆಯೇ ತೇಜಸ್ವಿನಿಗೆ ಬುದ್ದಿವಾದ ಹೇಳಿದ್ದಾರೆ.

ಮನನೊಂದ ವಿದ್ಯಾರ್ಥಿನಿ ತೇಜಸ್ವಿನಿ ಕಾಲೇಜಿನಿಂದ ಹೊರಗೆ ಓಡಿ ಹೋಗಿದ್ದಾಳೆ. ಎಷ್ಟೋ ಹುಡುಕಿದರೂ ತೇಜಸ್ವಿನಿ ಸಿಗಲಿಲ್ಲ. ಬಳಿಕ, ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ದೂರು ದಾಖಲಿಸಿದರು. ಭಾನುವಾರದಂದು ಮಹಾರಾಣಿ ಕೆರೆಯಲ್ಲಿ ತೇಜಸ್ವಿನಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page