ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್.ಐ. ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿ ಮಂಜುನಾಥ್ ಅವರು ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಹರೀಶ್ ಅವರು ರಾಜ್ಯ ಅಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕಗೊಳಿಸಿ ಅದೇಶ ಹೊರಡಿಸಿದ್ದರು.
ಮಂಜುನಾಥ್ ಅವರು ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರೊಫೆಷನರಿ ಅವಧಿ ಮುಗಿಸಿ ಬಳಿಕ ಅದೇ ಠಾಣೆಯಲ್ಲಿ ಮೂರು ತಿಂಗಳ ಕಾಲ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಒಂದು ವರ್ಷಗಳ ಕಾಲ ಕಾನೂನು ಸುವ್ಯವಸ್ಥೆ ವಿಭಾಗದ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿ, ಮಂಗಳೂರು ಸೆನ್ ವಿಭಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯದಲ್ಲಿದ್ದರು. ಇದೀಗ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು, ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪರಂಗಿಪೇಟೆ ಅಪ್ರಾಪ್ತ ಬಾಲಕನ ನಾಪತ್ತೆ ಪ್ರಕರಣದ ಸಂಧಿಗ್ದ ಪರಿಸ್ಥಿತಿಯಲ್ಲಿರುವ ಸಮಯದಲ್ಲಿ ಮಂಜುನಾಥ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದಿಗಂತ್ ನ ಪತ್ತೆ ಕಾರ್ಯಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅವರು ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ನೂತನ ಎಸ್.ಐ. ಮಂಜುನಾಥ್ ಅವರು ತಂಡದೊಂದಿಗೆ ಸೇರಿಕೊಂಡು ಕರ್ತವ್ಯದಲ್ಲಿ ತೊಡಗಿಕೊಂಡಿದ್ದಾರೆ.
ಇವರ ಜೊತೆ ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಯಲ್ಲಿ ಕರ್ತವ್ಯ ಮಾಡುತ್ತಿರುವ ಎಸ್. ಐ. ಗಳಾದ ನಂದಕುಮಾರ್, ಪ್ರಸನ್ನ, ಅವಿನಾಶ್, ಉದಯರವಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಹರೀಶ್ ಅವರು ಕೂಡ ಇಲ್ಲೇ ಉಳಿದುಕೊಂಡು ನಾಪತ್ತೆ ಪ್ರಕರಣದ ತನಿಖೆಯಲ್ಲಿ ನೆರವು ನೀಡುತ್ತಿದ್ದಾರೆ.