ಕರೆಂಟ್ ಕಳ್ಳರಿಗೆ ಭಾರಿ ದಂಡ! ಬರೋಬ್ಬರಿ 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಿಧಿಸಿದ ಅಧಿಕಾರಿಗಳು

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ
ಕರೆಂಟ್ ಕಳ್ಳರಿಗೆ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂದಿದ್ದಾರೆ. ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.
ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಗೃಹ, ವಾಣಿಜ್ಯ ವಿದ್ಯುತ್ ಸಂಪರ್ಕ ಪಡೆದವರ ಪೈಕಿ 1,312 ವಿದ್ಯುತ್ ಕಳ್ಳತನ ಪ್ರಕರಣಗಳು ಸಾಬೀತಾಗಿವೆ. ಈ ಪ್ರಕರಣಗಳಿಂದ ಒಟ್ಟು 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಸೂಲಿ ಮಾಡಲಾಗುತ್ತಿದೆ.
ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿಯೇ ಸೆಸ್ಕ್ ಅಧಿಕಾರಿಗಳು ಕಟ್ಟನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.