March 25, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ

ಸರ್ಕಾರಿ ಖರಾಬ್ ಜಮೀನಿಗೂ ಅಕ್ರಮ ಖಾತೆ ಮಾಡಿಕೊಟ್ಟ ಪ್ರಕರಣ

ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯಲ್ಲಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಕೆಜಿಎಫ್‌ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯ ಹಿಂದಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಕೆಜಿಎಫ್ ನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ. ಮಂಜು ಇವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತೀರ್ಪು ನೀಡಿದೆ.

ತೀರ್ಪಿನ ಪ್ರಕಾರ ಅಂದಿನ ಅಧ್ಯಕ್ಷ ಮಜು ಭಾರ್ಗವಿ, ಉಪಾಧ್ಯಕ್ಷ ಶಶಿಧರ್, ಪಿಡಿಓ ರತ್ನಮ್ಮ, ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್‌ಗಳಾದ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರು ಶಿಕ್ಷೆಗೊಳಗಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು.

ಅದೇ ರೀತಿ, ಫಲಾನುಭವಿಗಳಾದ ಅಕ್ರಮ ಖಾತೆ ಮಾಡಿಕೊಂಡ ಮುರುಗೇಶ್, ಸುಬ್ರಮಣಿ, ಕದಂಬವತಿ, ಶ್ರೀನಿವಾಸ್, ಪ್ರಿಯ, ಶ್ರೀಧರ್, ಅಣ್ಣಾದೊರೈ, ಆರ್. ಪಾಂಡುರಂಗನ್ ಮತ್ತು ಬಿ. ರವಿಚಂದ್ರನ್ ಪ್ರಕರಣದಲ್ಲಿ ಅಪರಾಧಿಗಳಾಗಿದ್ದಾರೆ.

ಉಳಿದ ತಪ್ಪಿತಸ್ಥರಾದ ಗಂಗಾಧರಂ, ಜಗದಂಬಾಲ್ ಮತ್ತು ಎಡ್ವಿನ್ ಮೃತಪಟ್ಟಿದ್ದಾರೆ. ಪ್ರಕರಣದ ಆರೋಪಿಗಳಾದ ಮಂಜು ಭಾರ್ಗವಿ, ಶಶಿಧರ್, ಪಿಡಿಓ ರತ್ನಮ್ಮ, ಸಿಬ್ಬಂದಿ ನಾರಾಯಣಸ್ವಾಮಿ ಮತ್ತು ರಾಜೇಂದ್ರ ಅವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಇನ್ನು ಅಕ್ರಮ ಜಮೀನಿನ ಫಲಾನುಭವಿಗಳಾದ 9 ಮಂದಿಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. 12 ಮಂದಿಗೆ ಅಕ್ರಮವಾಗಿ ಖಾತೆ ಮಾಡಿಕೊಡಲಾಗಿತ್ತು.

You may also like

News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ – ಕೆ.ವಿ. ಪ್ರಭಾಕರ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ
News

MLC ಐವನ್‌ ಡಿಸೋಜಾರವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸೌಹಾರ್ದ ಇಫ್ತಾರ್‌ ಕೂಟ

ಮಂಗಳೂರು ಪಂಪ್ ವೆಲ್ ಬಳಿಯ ಫಾದರ್‌ ಮುಲ್ಲರ್‌ ಕನ್ವೆನ್ಷನ್ ಹಾಲ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರ ನೇತೃತ್ವದಲ್ಲಿ 10ನೇ ವರ್ಷದ ಸೌಹಾರ್ಧ ಇಪ್ತಾರ್‌ ಕೂಟವನ್ನು

You cannot copy content of this page