ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿ – ಪಿಡಿಓ, ಗ್ರಾಮ ಲೆಕ್ಕಿಗರಿಂದ ಸ್ವತಃ ಪರಿಶೀಲಿಸಲು ಆದೇಶ

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಗೆ ಮನೆ ಮನೆ ಪರಿಶೀಲನೆ
ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಮನೆಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಪಿಎಲ್ ಕಾರ್ಡ್ ಹೊಂದಿರುವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ ಇವರೆಲ್ಲರೂ ಎಪಿಎಲ್ ಕಾರ್ಡ್ ಪಡೆಯಬೇಕಿತ್ತು. ಈ ಹಿಂದೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು.
ಶೀಘ್ರ ಹೊಸ ಪಡಿತರ ಚೀಟಿ ವಿತರಣೆ ಪ್ರಾರಂಭ
ಅರ್ಜಿಗಳನ್ನು ಪರಿಶೀಲಿಶಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.