ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ ‘ಪೊಲೀಸ್’ ಎಂದು ಬರೆಸುವಂತಿಲ್ಲ- ಗೃಹ ಸಚಿವ ಡಾ.ಜಿ. ಪರಮೇಶ್ವರ್

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ರವರು ವಿಧಾನ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಿದ್ದಾರೆ.
ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಉತ್ತರ ನೀಡಿದ್ದಾರೆ. ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಅವರು ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂದು ಪ್ರಶ್ನಿಸಿದ್ದಾರೆ.
ಅದಕ್ಕೆ ಗೃಹ ಸಚಿವರು ಉತ್ತರಿಸಿ ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ, ತಮ್ಮ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಯಿಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಖಾಸಗಿ ವಾಹನಗಳ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೆ, ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.