September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಜೆಸ್ಲಿಟಾ ಸೆರಾವೊ ಆತ್ಮಹತ್ಯೆ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಮನೆಯೊಂದರಲ್ಲಿ ವಿದ್ಯಾರ್ಥಿನಿಯ ಶವ ನೇಣು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ದಾಮಸ್ ಕಟ್ಟೆ ನಿವಾಸಿ 21 ವರ್ಷ ಪ್ರಾಯದ ಜೆಸ್ಲಿಟಾ ಸೆರಾವೊ ಎಂದು ಗುರುತಿಸಲಾಗಿದೆ.

ಮೃತ ಜೆಸ್ಲಿಟಾ ಸೆರಾವೊ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಪದವಿ ಶಿಕ್ಷಣ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದಳು. ಬೆಳಗಿನ ಜಾವ ಹೆತ್ತವರು ಚರ್ಚ್ ಗೆ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯಲ್ಲಿದ್ದ ಫ್ಯಾನ್ ಗೆ ಚೂಡಿದಾರ್ ಶಾಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯವರು ಚರ್ಚ್ ನಿಂದ ವಾಪಾಸ್ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದು ಬಂದಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸನ್ನು ದಾಖಲಿಸಿ ಕೊಂಡಿದ್ದಾರೆ.  ಮೃತಳು ತಂದೆ ತಾಯಿ ಮತ್ತು ಅಣ್ಣನನ್ನು ಅಗಲಿದ್ದಾಳೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page