ಬಜರಂಗದಳ ಮುಖಂಡ ವಿಜೇಶ್ ಕುಮಾರ್ ಹೃದಯಾಘಾತದಿಂದ ನಿಧನ

ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ 30 ವರ್ಷ ಪ್ರಾಯದ ವಿಜೇಶ್ ಕುಮಾರ್ ರವರು ಮಾರ್ಚ್ 11ರಂದು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮಂಗಳವಾರದಂದು ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆಯು ವಿದ್ಯಾಗಿರಿಯಲ್ಲಿರುವ ಅವರ ಸ್ವಗೃಹದಲ್ಲಿ ನಡೆಯಿತು.