ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಾರ್ಚ್ 12ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು. ಬಳಿಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಪರೀಕ್ಷಾ ಸಿದ್ಧತೆ ಮತ್ತು ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ರವರು ಕೂಡ ಇದ್ದರು.