ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮ

ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರವರಿಗೆ ಸನ್ಮಾನ
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜಿಸಿಐ ವಿಟ್ಲ ಆಶ್ರಯದಲ್ಲಿ ಬಿಸಿಎಂ ಹಾಸ್ಟೆಲ್ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಮಾರ್ಚ್ 8ರಂದು ಶನಿವಾರ ಸಂಜೆ 5:30ಕ್ಕೆ ಹಮ್ಮಿಕೊಳ್ಳಲಾಯಿತು. ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ಇವರು ತರಬೇತಿ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಜೆಸಿಐ ವಿಟ್ಲದ ಅಧ್ಯಕ್ಷೆ ಜೆಸಿ ಸೆನೆಟರ್ ಸೌಮ್ಯ ಚಂದ್ರಹಾಸ ಕೊಪ್ಪಳ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಉಪಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ಹಾಗೂ ವಲಯ ತರಬೇತುದಾರ ಜೆಸಿ ಜೈ ಕಿಸಾನ್ ರವರು ಭಾಗವಹಿಸಿದ್ದರು.
ತದ ನಂತರ ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರವರನ್ನು ಸನ್ಮಾನಿಸಿ ಗೌರವಿಸಲಾಯಿತು ಕಾರ್ಯಕ್ರಮಕ್ಕೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.