ಕರ್ನಾಟಕ ರಾಜ್ಯ ಸರಕಾರ ದಲಿತ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಗೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆಯಾದ ಮೋಹನ್ ಚಂಡ್ತಿಮಾರ್

ಮಂಗಳೂರು : ಕರ್ನಾಟಕ ರಾಜ್ಯ ಘನ ಸರ್ಕಾರದ ಉಪ ನಿರ್ದೇಶಕ ಕಛೇರಿ ಸಮಾಜ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಉಸ್ತುವಾರಿ ಮತ್ತು ಜಾಗೃತಿ ಸಮಿತಿಯ ಜಿಲ್ಲಾ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಬಂಟ್ವಾಳ ತಾಲೂಕು ಚೆಂಡ್ತಿಮಾರ್ ಮೋಹನ್ ಚಂಡ್ತಿಮಾರ್ ಆಯ್ಕೆಯಾಗಿದ್ದಾರೆ.
ಈ ಸಮಿತಿಯು ಜಿಲ್ಲಾಧಿಕಾರಿಯರವ ಅಧ್ಯಕ್ಷತೆಯಲ್ಲಿ ಜರುಗುತ್ತದೆ. ಪ್ರತಿ ತಿಂಗಳು ನಿಗದಿತ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲೆಯ ಎಲ್ಲಾ ತಾಲೂಕುಗಳ ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು ಈ ಸಮಿತಿಯು ಕಾರ್ಯಾಚರಿಸುತ್ತದೆ.
ಪ್ರಸ್ತುತ ಮೋಹನ್ ಚಂಡ್ತಿಮಾರ್ ರವರು 2024 – 2025 ನೇ ಸಾಲಿನ ಜಿಲ್ಲಾ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.