July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇಧಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವೊಂದನ್ನು ಬೇಧಿಸಿದ ಮಂಗಳೂರು ಪೊಲೀಸರು ಸುಮಾರು 75 ಕೋಟಿ ರೂಪಾಯಿ ಮೌಲ್ಯದ 37.87 ಕೆ.ಜಿ. ತೂಕದ ಎಂಡಿಎಂಎ ಡ್ರಗ್ಸನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಎರಡು ಟ್ರಾಲಿ ಬ್ಯಾಗ್ ಗಳಲ್ಲಿ ಸಾಗಾಟ ಮಾಡಿದ್ದ 75 ಕೋಟಿ ರೂಪಾಯಿ ಮೌಲ್ಯದ 37.585 ಕೆಜಿ ಎಂಡಿಎಂಎ ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ 31 ವರ್ಷ ಪ್ರಾಯದ ಬಂಬಾ ಫಂಟಾ ಮತ್ತು 30 ವರ್ಷ ಪ್ರಾಯದ ಅಬಿಗೈಲ್ ಅಡೊನಿಸ್ ಬಂಧಿತ ಆರೋಪಿಗಳು.

ಮಾರ್ಚ್ 14ರಂದು ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹೈದರ್ ಆಲಿ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೈಜಿರಿಯಾದ ಪ್ರಜೆ ಪೀಟರ್ ಇಕೆಡಿ ಬೆಲೊನ್ವೊ ಎಂಬಾತನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಈತನಿಂದ 6.248 ಕೆಜಿ ಎಂಡಿಎಂಎ ವಶಪಡಿಸಲಾಗಿತ್ತು.

ಈತನ ಹಿನ್ನೆಲೆಯನ್ನು ಬೆನ್ನತ್ತಿ ಹೋದ ಮಂಗಳೂರು ಸಿಸಿಬಿ ಪೊಲೀಸರು ಆರು ತಿಂಗಳ ನಿರಂತರ ತನಿಖೆಯಿಂದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ದೆಹಲಿಯಿಂದ ಬೆಂಗಳೂರಿಗೆ ಮತ್ತು ದೇಶದ ಇತರ ಸ್ಥಳಗಳಿಗೆ ಎಂಡಿಎಂಎ ವಿಮಾನ ಮಾರ್ಗದ ಮೂಲಕ ಪೂರೈಕೆ ಮಾಡುತ್ತಿದ್ದ ಮಾಹಿತಿ ದೊರಕಿತ್ತು.

ಮಂಗಳೂರು ನಗರ ಪೊಲೀಸರು ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇಧಿಸಿದ 75 ಕೋಟಿ ರೂಪಾಯಿ ಮೌಲ್ಯದ 37 ಕೆಜಿ ಎಂಡಿಎಂಎ ಮಾದಕ ದ್ರವ್ಯ ವಶಪಡಿಸಿಕೊಂಡಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮಾದಕ ದ್ರವ್ಯ ಹಿಂದಿರುವ ಪ್ರತಿಯೊಬ್ಬರನ್ನು ಮಟ್ಟ ಹಾಕಲು ಸರಕಾರ ಬದ್ಧವಾಗಿದೆ. ಯುವಜನತೆ, ವಿದ್ಯಾಥಿ೯ಗಳನ್ನು ಇಂತಹ ಮಾದಕತೆಗಳಿಂದ ರಕ್ಷಿಸಲು ನಿರಂತರವಾಗಿ ಕಾಯಾ೯ಚರಣೆ ಮುಂದುವರಿಸಲಾಗುವುದು ಎಂದವರು ತಿಳಿಸಿದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page