ಮಂಗಳೂರು ಜಿಲ್ಲಾ ವಾರ್ತಾ ಇಲಾಖೆಯಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರಿಗೆ ಅಭಿನಂದನೆ
ಮಂಗಳೂರು : ಬೆಂಗಳೂರಿನಲ್ಲಿ 75 ಕೋಟಿ ರೂ್ಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ಪೊಲೀಸ್ ತಂಡದ ಕಾರ್ಯಾಚರಣೆಗಾಗಿ ಜಿಲ್ಲಾ ವಾರ್ತಾ ಇಲಾಖೆಯಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಇಂದು ಮಾರ್ಚ್ 17ರಂದು ಸೋಮವಾರ ಗೌರವಿಸಲಾಯಿತು.


ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.




