February 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರನ ಸೆರೆ – ಮಾದಕ ವಸ್ತು MDMA  ವಶ

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ನಿಷೇಧಿತ ಮಾದಕ ವಸ್ತು MDMA ನ್ನು ವಶಪಡಿಸಿಕೊಂಡಿರುತ್ತಾರೆ.

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರನೋರ್ವನು ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ಮಂಗಳೂರು ನಗರ ನಂತೂರು ಪರಿಸರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಅಂಚೆ, ನಾಂಗಿ ಹೌಸ್, ನಾಂಗಿ ಕಡಪ್ಪುರಂ ನಲ್ಲಿನ ಮಹಮ್ಮದ್ ಅಶ್ರಫ್ ಎಂಬವರ ಮಗ ಆರೋಪಿ 32ವರ್ಷ ಪ್ರಾಯದ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಸುಮಾರು ರೂಪಾಯಿ 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿನ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದನು. ನ್ಯಾಯಾಲಯದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಈತನ ವಿರುದ್ಧ ವಾರಂಟ್ ಜಾರಿಯಲ್ಲಿರುತ್ತದೆ.

ಈ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ IPS  ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು ( ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ರವರಾದ ಸಿದ್ದಾರ್ಥ ಗೋಯಲ್ IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಕೆ. ರವಿಶಂಕರ್ KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ., ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ., ನರೇಂದ್ರ ಹಾಗೂ ಎಎಸ್ಐ ರವರಾದ ಮೋಹನ್ ಕೆ.ವಿ., ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

You may also like

News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ,
News

ಅಮೆರಿಕದಲ್ಲಿ ರಸ್ತೆ ಅಪಘಾತ

ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಭಾರಿ ಪರಿಹಾರ ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ 2023ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ

You cannot copy content of this page