November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲೆಯ 5 ರಿಂದ 16 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ನಗರದ ಉರ್ವಸ್ಟೋರ್ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.


ಹುಲಿ ಕುಣಿತ, ಸೃಜನಾತ್ಮಕ ಪ್ರದರ್ಶನ ಕಲೆ (ಭರತನಾಟ್ಯ, ಕರಾವಳಿಯ ಜಾನಪದ, ಯಕ್ಷ ನೃತ್ಯ), ವಾದ್ಯ ಸಂಗೀತ, ಸುಗಮ ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಮಕ್ಕಳು ಮಾರ್ಚ್ 20 ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಒಂದು ಮಗುವಿಗೆ ಒಂದು ಸ್ಪರ್ಧೆಯಲ್ಲಿ ಭಾಗವಹಿಸಲು ಮಾತ್ರ ಅವಕಾಶ. ಪ್ರತೀ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳಿಗೆ 3 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಹುಲಿ ಕುಣಿತ ಮತ್ತು ಸೃಜನಾತ್ಮಕ ಪ್ರದರ್ಶನ ಕಲೆ ಗುಂಪು ಸ್ಪರ್ಧೆಗಳಾಗಿರುತ್ತದೆ. ವಿಜೇತರಿಗೆ ಪ್ರಮಾಣ ಪತ್ರದ ಜೊತೆಗೆ ಸೂಕ್ತ ಬಹುಮಾನ ಹಾಗೂ ಭಾಗವಹಿಸುವ ಎಲ್ಲ ಮಕ್ಕಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗೆ ಮಂಗಳೂರು ಬಿಜೈ ಮೆಸ್ಕಾಂ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿ (ದೂರವಾಣಿ ಸಂಖ್ಯೆ : 8217296141) ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page