November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಟೋರ್ ನಲ್ಲಿ ಸಿಕ್ಕಿದ ಅಕ್ಕಿಯನ್ನು (ಆಹಾರಧಾನ್ಯ) ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು – ರಾಜ್ಯ ಸರ್ಕಾರ ಮಹತ್ವದ ಆದೇಶ

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್‍ಎಫ್‍ಎಸ್‍ಎ) ಯಡಿ ವಿತರಿಸಲಾಗುವ 5 ಕೆಜಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂಪಾಯಿ 34ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂಪಾಯಿ 170ರಂತೆ ಹಣವನ್ನು ವರ್ಗಾಯಿಸಲಾಗಿರುತ್ತದೆ.

ಆದರೆ ಫೆಬ್ರವರಿ-2025 ನೇ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನೇ ನೀಡುವ ಕುರಿತು ಸರ್ಕಾರವು ತೀರ್ಮಾನಿಸಿ, ಆದೇಶವನ್ನು ಹೊರಡಿಸಿದೆ. ಫೆಬ್ರವರಿ-2025ನೇ ಮಾಹೆಗೆ ಸಂಬಂಧಿಸಿದ 5 ಕೆಜಿ ಅಕ್ಕಿಯನ್ನು ಮಾರ್ಚ್-2025 ನೇ ತಿಂಗಳ ಪಡಿತರ ವಿತರಣೆಯಲ್ಲಿ ಸೇರ್ಪಡೆಗೊಳಿಸಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರು ಹಂಚಿಕೆ ಮಾಡಿರುತ್ತಾರೆ.

ಫೆಬ್ರವರಿ-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಹಾಗೂ ಮಾರ್ಚ್-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 5 ಕೆಜಿ ಅಕ್ಕಿ ಒಟ್ಟು ಆದ್ಯತಾ ಪಡಿತರ ಚೀಟಿಗೆ ಮಾರ್ಚ್-2025ನೇ ಮಾಹೆಯಲ್ಲಿ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವದು. ಅಂತ್ಯೋದಯ ಪಡಿತರ ಚೀಟಿಯಲ್ಲಿರುವ ಒಬ್ಬ, ಇಬ್ಬರು ಮತ್ತು ಮೂರು ಜನ ಸದಸ್ಯರಿಗೆ 35 ಕೆಜಿ ಅಕ್ಕಿ, ನಾಲ್ಕು ಜನ ಸದಸ್ಯರಿದ್ದರೆ 45 ಕೆಜಿ ಅಕ್ಕಿ, ಐದು ಜನ ಸದಸ್ಯರಿದ್ದರೆ 65 ಕೆಜಿ ಅಕ್ಕಿ, ಆರು ಜನ ಸದಸ್ಯರಿದ್ದರೆ 85 ಕೆಜಿ ಅಕ್ಕಿ, 7 ಜನ ಸದಸ್ಯರಿದ್ದರೆ 105 ಕೆಜಿ ಅಕ್ಕಿ ಹಾಗೂ 10 ಕ್ಕಿಂತ ಮೇಲ್ಪಟ್ಟು ಸದಸ್ಯರು ಇದ್ದಲ್ಲಿ ಇದೇ ಅನುಪಾತ ಮುಂದುವರೆಸಿ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page