July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ಮೇಲೆ ಮರದ ಕೊಂಬೆ ಮುರಿದುಬಿದ್ದು ಬ್ಯಾಂಕ್ ಉದ್ಯೋಗಿ ಮೃತ್ಯು

ಬೆಳ್ತಂಗಡಿ: ಸಂಚಾರದಲ್ಲಿದ್ದ ಬೈಕ್ ಮೇಲೆ ಮರದ ಕೊಂಬೆಯೊಂದು ಮುರಿದುಬಿದ್ದು ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ಮಾರ್ಚ್ 20ರಂದು ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಬೆಳಾಲು ಗ್ರಾಮದ ನಿವಾಸಿ 25ವರ್ಷ ಪ್ರಾಯದ ಪ್ರವೀಣ್ ಮೃತಪಟ್ಟ ಯುವಕ.

ಪ್ರವೀಣ್ ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಎಂದಿನಂತೆ ಕೆಲಸ ಮುಗಿದ ಬಳಿಕ ಬೈಕ್ನಲ್ಲಿ ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಮನೆಯತ್ತ ತೆರಳುತ್ತಿದ್ದರು. ಆದರೆ ಜಾರಿಗೆಬೈಲು ಎಂಬಲ್ಲಿ ಬರುತ್ತಿದ್ದಾಗ ರಸ್ತೆಬದಿಯ ಮರದ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದು ಅವರು ಸವಾರಿ ಮಾಡುತ್ತಿದ್ದ ಬೈಕ್ಮೇಲೆಯೇ ಬಿದ್ದಿದೆ. ಪರಿಣಾಮ ಪ್ರವೀಣ್ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page