April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾರ್ಚ್ 30ರಿಂದ ಎಪ್ರಿಲ್ 6ರ ತನಕ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದಲ್ಲಿ 65 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಜಾತ್ರಾ ಮಹೋತ್ಸವ

ಧರ್ಮಸ್ಥಳ : ಶ್ರೀ ಗುರುದೇವ ಮಠ ದೇವರಗುಡ್ಡ, ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ 65 ನೇ ವರ್ಷದ  ಶ್ರೀ ರಾಮ ತಾರಕ ಮಂತ್ರ ಸಪ್ತಾಹ, ಪ್ರತಿಷ್ಠಾ ಜಾತ್ರಾ ಮಹೋತ್ಸವ  ಹಾಗೂ ಮಹಾ ಬ್ರಹ್ಮ ರಥೋತ್ಸವ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ  ಸ್ಮರಣೆಯೊಂದಿಗೆ ಮಾರ್ಚ್ 30ರಿಂದ ಎಪ್ರಿಲ್ 6ರ ತನಕ ನಡೆಯಲಿದೆ ಎಂದು ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು.

ಅವರು ಶ್ರೀ ರಾಮ ಕ್ಷೇತ್ರದಲ್ಲಿ ಮಾರ್ಚ್ 22ರಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು, ಉಭಯ ಜಿಲ್ಲೆಯ ಶಾಸಕರು, ಮಂತ್ರಿಗಳು, ಕ್ಷೇತ್ರದ ಟ್ರಸ್ಟಿಗಳು, ನಾನಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಾರ್ಚ್ 30ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಜಾತ್ರೋತ್ಸವದ ಉದ್ಘಾಟನೆ, ಶ್ರೀ ಸಿದ್ಧಿ ವಿನಾಯಕ ಮತ್ತು ಕ್ಷೇತ್ರ ಪಾಲ ಗಣಪತಿ ದೇವರ ಬಲಿ ಉತ್ಸವ ಜರಗಲಿದೆ. ಮಾರ್ಚ್ 31ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ, ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಶಿರಡಿ ಸಾಯಿಬಾಬಾ ಗುರುಗಳ ಉತ್ಸವ, ಮೂರ್ತಿಯ ಬಲಿ ಉತ್ಸವ.

ಎಪ್ರಿಲ್ 1ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಶ್ರೀ ರಾಮ ದೇವರ ರಜತ ಪಾಲಕಿ ಉತ್ಸವ, ಎಪ್ರಿಲ್ 2ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಪುಷ್ಪ ರಥೋತ್ಸವ ಜರಗಲಿದೆ. ಎಪ್ರಿಲ್ 3ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ಶ್ರೀ ದುರ್ಗಾ ಪರಮೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಚಂದ್ರಮಂಡಲೋತ್ಸವ, ಎಪ್ರಿಲ್ 4ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ರಾತ್ರಿ 7 ರಿಂದ ಬಲಿಮೂರ್ತಿ, ಬಲಿ ಉತ್ಸವ, ಬೆಳ್ಳಿ ರಥೋತ್ಸವ, ಎಪ್ರಿಲ್ 5ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು, ಸಂಜೆ 5.00 ಗಂಟೆಗೆ ತ್ಯಾಗ ಶಾಲಾ ಪ್ರವೇಶ ಭಗವದ್ ವಾಸುದೇವ ಪುಣ್ಯಾಹ, ಪ್ರಧಾನ ಹೋಮಗಳು, ರಾತ್ರಿ 8 ಗಂಟೆಗೆ ದತ್ತಾತ್ರೇಯ ಮೂರ್ತಿ ಮತ್ತು ಶ್ರೀ ಆಂಜನೇಯ ದೇವರ ಮೂರ್ತಿ ಬಲಿ ಉತ್ಸವ ಮತ್ತು ಶ್ರೀ ಹನುಮಾನ್ ರಥೋತ್ಸವ ಜರುಗಲಿದೆ.

 

ಎಪ್ರಿಲ್ 6ರಂದು ಬೆಳಿಗ್ಗೆ 9.30 ಕ್ಕೆ ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ, ಮಧ್ಯಾಹ್ನ ಪಾಲಕಿ ಬಲಿ ಉತ್ಸವ, ರಾತ್ರಿ 7 ರಿಂದ ರಕ್ತೇಶ್ವರಿ ಮತ್ತು ಗುಳಿಗ ದೈವಗಳ ನೇಮೋತ್ಸವ ರಾತ್ರಿ 10 ಗಂಟೆಗೆ ಮಹಾ ಬ್ರಹ್ಮ ರಥೋತ್ಸವ ಜರಗಲಿದೆ. ಎಪ್ರಿಲ್ 8ರಂದು ಆದಿ ಪಜಿರಡ್ಕದಲ್ಲಿ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ರಾತ್ರಿ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ – ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಮಾರ್ಚ್ 30ರಿಂದ ಎಪ್ರಿಲ್ 6ರ ತನಕ 65 ನೇ ವರ್ಷದ ಅಹೋರಾತ್ರಿ ಶ್ರೀ ರಾಮ ತಾರಕ ಮಂತ್ರ ಭಜನೆ ನಡೆಯಲಿದೆ ಎಂದು ಹೇಳಿದರು. ಶಾಸಕ ಹರೀಶ್ ಪೂಂಜ ಮಾತನಾಡಿ ಸ್ವಾಮಿಜಿಗಳಿಗೆ ಮಹಾಮಂಡಲೇಶ್ವರ ಪದವಿ ಸಿಕ್ಕಿದ್ದು ನಮ್ಮ ದಕ್ಷಿಣ ಭಾರತಕ್ಕೆ ಹೆಮ್ಮೆಯ ವಿಚಾರವಾಗಿದೆ. ಜಾತ್ರೋತ್ಸವದಲ್ಲಿ ಎಲ್ಲಾ ಭಾಗಗಳ ಜನರು ಹೊರೆ ಕಾಣಿಕೆ ಸಮರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ, ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿಯ ಸಂಚಾಲಕ ಜಯಂತ ಕೋಟ್ಯಾನ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅಭಿನಂದನ್ ಹರೀಶ್ ಕುಮಾರ್, ಜಿಲಾ ಪಂಚಾಯತ್ ಮಾಜಿ ಸದಸ್ಯೆ ನಮಿತಾ, ಕ್ಷೇತ್ರದ ಟ್ರಷ್ಟೀ ತುಕಾರಾಮ ಸಾಲಿಯಾನ್ ಆರ್ಲ ಉಪಸ್ಥಿತರಿದ್ದರು.

ಜಾತ್ರೋತ್ಸವ ಸಮಾಲೋಚನಾ ಸಭೆ : 65 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವದ ಯಶಶ್ವಿ ಅಂಗವಾಗಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಭಕ್ತರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಭಕ್ತರು, ಊರವರು, ರಥ ಬೀದಿ ವ್ಯಾಪಾರಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page