July 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ – ಕೆ.ವಿ. ಪ್ರಭಾಕರ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಪತ್ರಿಕಾ ಭವನಕ್ಕೆ ಇಂದು ಮಾರ್ಚ್ 25ರಂದು ಮಂಗಳವಾರ ಭೇಟಿ ನೀಡಿದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು.


ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ. ಸಮಾಜ, ಜನರ ಪರ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೂ ನೆರವಿನ ಅಗತ್ಯವಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ದೊರಕುವ ಸೌಲಭ್ಯಗಳು ಪತ್ರಕರ್ತರಿಗೆ ಒದಗಿಸುವ ನಿಟ್ಟಿನಲ್ಲಿ ಪಯತ್ನಿಸುತ್ತಿರುವುದಾಗಿ ಅವರು ಹೇಳಿದರು.


ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜತೆ ಚರ್ಚಿಸಿ ಪತ್ರಕರ್ತರ ನಿವೃತ್ತಿ ಮಾಶಾಸನವನ್ನು 15000 ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ, ಪತ್ರಕರ್ತರ ಆರೋಗ್ಯಕ್ಕೆ ಸಂಬಂಧಿಸಿ ಮಾಧ್ಯಮ ಸಂಜೀವಿನಿ ಎಂಬ ಯೋಜನೆ ಜಾರಿಗೆ ತರಲಾಗಿದ್ದು, 10 ಕೋಟಿ ರೂಪಾಯಿ ಅನುದಾನವನ್ನು ಬಜೆಟ್‌ನಲ್ಲಿ ಇರಿಸಲಾಗಿದೆ ಎಂದವರು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಬೇಡಿಕೆಯಂತೆ ಸಂಘಕ್ಕೆ ಸುಸಜ್ಜಿತ ಭವನ ನಿರ್ಮಾಣಕ್ಕೆ ಸಂಬಂಧಿಸಿ ಜಾಗ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಕ್ರಮ ವಹಿಸುವುದಾಗಿ ಕೆ.ವಿ. ಪ್ರಭಾಕರ್ ಈ ಸಂದರ್ಭ ಭರವಸೆ ನೀಡಿದರು. ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಈ ಸಂದರ್ಭ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕರ್ನಾಟಕ ಕೊಯರ್ ಬೋರ್ಡ್ ಅಧ್ಯಕ್ಷ ನಟರಾಜ್, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್., ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page