April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ  ಸಂಯುಕ್ತ ಆಶ್ರಯದಲ್ಲಿ  ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್‌ ಹಾಸ್ಟೆಲ್‌ನ ವಾರ್ಡನ್‌ ಸಿಸ್ಟರ್‌ ಲೂರ್ದ್‌ ಮೇರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಿಗೆ ಕಾರಣೀಭೂತರಾದ ಮೇರಿ ಕ್ಯೂರಿ, ಅಗಸ್ಟಾ ಅಡಾ ಮುಂತಾದ ಮಹಿಳೆಯರ ಸಾಧನೆಗಳನ್ನು ಉದಾಹರಿಸಿದ ಅವರು ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಯಾವರೀತಿಯ ಸಾಧನೆ ಮಾಡಿರುತ್ತಾರೆ ಎಂಬುದನ್ನು ತಿಳಿಸಿದರು. “ನಾವು ಯಾವತ್ತೂ ಬೇರೆಯವರಿಂದ ಸ್ಪೂರ್ತಿ ಪಡೆಯುತ್ತೇವೆ. ನಮ್ಮಲ್ಲಿ ಅಂತರ್ಗತವಾದ ಅಗಾಧ ಶಕ್ತಿಯ ಅರಿವು ನಮಗಿರುವುದಿಲ್ಲ. ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬೇಕಿದ್ದಲ್ಲಿ ನಮ್ಮ ಸಾಮರ್ಥ್ಯದ ಬಗ್ಗೆ ಅರಿವು ಹಾಗೂ ಸ್ವಸಾಮರ್ಥ್ಯದ ಮೇಲೆ ನಂಬಿಕೆ ಇರಬೇಕು” ಎಂದು ಹೇಳಿ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಇರುವ ಅವಕಾಶಗಳು ಹಾಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊರವರು “ಸಮಾಜವನ್ನು ರೂಪಿಸುವಲ್ಲಿ, ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ನಾಯಕತ್ವ, ಶಿಕ್ಷಣ ಮತ್ತು ಉದ್ಯಮಶೀಲತೆಯಲ್ಲಿ ಮಹಿಳೆಯರು   ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಪುರುಷರು ಮಹಿಳೆಯರನ್ನು ನಿಗ್ರಹಿಸುತ್ತಾರೆ ಎಂಬುದು ಮಿಥ್ಯೆ ಬದಲಾಗಿ ಪುರುಷರು ಯಾವಾಗಲೂ ಮಹಿಳೆಯರ ಪ್ರಗತಿಗೆ ಬೆಂಬಲಿಗರು. ಮಹಿಳೆಯರನ್ನು ಸಶಕ್ತಗೊಳಿಸುವಲ್ಲಿ ಪುರುಷರ ಪಾತ್ರ ಮುಖ್ಯ.  ಮಹಿಳೆಯರಲ್ಲಿನ ಕ್ರಿಯಾಶೀಲತೆ, ನಾಯಕತ್ವ ಮತ್ತು ಸಂಶೋಧನಾ ಪ್ರೌಋತ್ತಿಗಳನ್ನು ಪ್ರೋತ್ಸಾಹಿಸಲು ಕಾಲೇಜು ಯಾವತ್ತೂ ಬದ್ಧವಾಗಿದೆ.  ಸಮಾನತೆ ಮತ್ತು ನಾವೀನ್ಯತೆಗೆ ಕಾಲೇಜು ಸದಾ ಪ್ರೋತ್ಸಾಹ ನೀಡುತ್ತದೆ” ಎಂದು ಹೇಳಿ ಕಾರ್ಯಕ್ರಮದ ಆಯೋಜಕರನ್ನು ಪ್ರಶಂಸಿಸಿದರು.

ಸುರಭಿ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರೂ ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರೂ ಅದ ಡಾ. ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಐಐಸಿ ಘಟಕದ ಸಂಯೋಜಕರೂ ಪರೀಕ್ಷಾಂಗ ಉಪಕುಲಸಚಿವರೂ ಆದ ಅಭಿಷೇಕ್‌  ಸುವರ್ಣ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಉಪನ್ಯಾಸಕಿ ವಾರಿಜಾ ಎಂ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಐಐಸಿ ಘಟಕದ ಸಂಯೋಜಕರಾದ ಡಾ. ಗೀತಾ ಪೂರ್ಣಿಮಾ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಸಿಎ ವಿಭಾಗ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

 

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page