September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ಪ್ರಸಾದ್ ಮಲ್ಟಿ ಸ್ಪೆಷ್ಟಾಲಿಟಿ ಹಾಸ್ಪಿಟಲ್ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆಯೋಜಿಸಲಾದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸದಾ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು  ಎಂದು  ಅವರು ಹೇಳಿದರು.

ರೋಟರಿ ಕ್ಲಬ್ ಮಾಜಿ ಗವರ್ನರ್ ಡಾ. ದೇವದಾಸ್ ರೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ  ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸದ್ಯ ರಾಜೇಶ್ ದಡ್ಡಂಗಡಿ, ಪ್ರಸಾದ್ ನೇತ್ರಾಲಯದ ವೈದ್ಯ ಡಾ. ನಿರಂಜನ್, ಸಾರ್ವಜನಿಕ ಸಂಪರ್ಕಧಿಕಾರಿ ಯೂಸುಫ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page