ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯೋಗದ ಆಯುಕ್ತ

ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ.
ಬ್ಲ್ಯಾಕ್ ಲಿಸ್ಟ್ ನಲ್ಲಿರುವ RTI ಕಾರ್ಯಕರ್ತನ ಹೆಸರು ತೆಗೆಯಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಮಾರ್ಚ್ 27ರಂದು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. RTI ಕಾರ್ಯಕರ್ತ ಸಾಯಿಬಣ್ಣ ಅವರ ಹೆಸರನ್ನು ಕಪ್ಪು ಪಟ್ಟಿಯಿಂದ ತೆಗೆಯಲು ಡಾಕಪ್ಪರವರು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ರೂಪಾಯಿ ಒಂದು ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇಳಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.