ಪರೀಕ್ಷೆಯಲ್ಲಿ ಅನುತ್ತೀರ್ಣ- ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕಳೆದ ವರ್ಷ ಹತ್ತನೇ ತರಗತಿಯಲ್ಲಿ ಅನುತ್ತೀರ್ಣಗೊಂಡಿದ್ದು, ನಂತರ ಟ್ಯೂಶನ್ ಪಡೆದು SSLC ಪೂರಕ ಪರೀಕ್ಷೆ ಬರೆದಿದ್ದರೂ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಪೆಗೊಂಡು 17 ವರ್ಷ ಪ್ರಾಯದ ವಿದ್ಯಾರ್ಥಿ ತೇಜಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಅಜೆಕಾರಿನಲ್ಲಿ ಸಂಭವಿಸಿದೆ.
ಕಳೆದ ವರ್ಷ SSLC ಪರೀಕ್ಷೆ ಮತ್ತು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಜಿಗುಪ್ಪೆಗೊಂಡ ವಿದ್ಯಾರ್ಥಿ ತೇಜಸ್ ಮನೆಯಿಂದ ಸ್ವಲ್ಪ ದೂರದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಂದೆ ರಮೇಶ ಮಂಜರಬೆಟ್ಟು ಅವರು ನೀಡಿದ ದೂರಿನಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.