April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ದಿಢೀರನೆ ಭೇಟಿ

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಎಪ್ರಿಲ್ 3ರಂದು ಗುರುವಾರ ಬಂಟ್ವಾಳ ತಾಲೂಕು ಕಚೇರಿಗೆ ಹಠಾತ್ ಭೇಟಿ ನೀಡಿ ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಬಂಟ್ಚಾಳ ತಹಶೀಲ್ದಾರ್ ಅವರಿಗೆ ಸೂಚಿಸಿದ್ದಾರೆ.

ಭೂ ಮಂಜೂರಾತಿ ನಂತರ ಸಾರ್ವಜನಿಕರು 1-5 ಮಾಡಲು ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ತಾಲೂಕು ಕಚೇರಿಗಳಲ್ಲಿ 1-5 ಪ್ರಕರಣಗಳ ಅರ್ಜಿಗಳನ್ನು ಆದ್ಯತೆಯಲ್ಲಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಯಚರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದೇ ವೇಳೆ ತಾಲೂಕು ಕಚೇರಿಯ ರೆಕಾರ್ಡ್ ರೂಂ ಅನ್ನು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆಯನ್ನು ವೀಕ್ಷಿಸಿದರು.

ಇದೇ ವೇಳೆ ಸರ್ವೆ ಇಲಾಖಾ ಕಚೇರಿಗೂ ಭೇಟಿ ನೀಡಿದ ಅವರು ಕಡತಗಳ ಸಂಗ್ರಹವನ್ನು ಪರಿಶೀಲಿಸಿದರು. ಸರ್ವೆ ಅರ್ಜಿ ವಿಲೇವಾರಿಯ ಮಾಹಿತಿ ಪಡೆದ ಅವರು ಯಾವುದೇ ಕಾರಣಕ್ಕೂ ಸರ್ವೆ ಕಾರ್ಯವನ್ನು ವಿಳಂಬಿಸಬಾರದೆಂದು ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆ, 1-5 ಪ್ರಕರಣಗಳ ವಿಲೇವಾರಿ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.

ಈ ಸಂದರ್ಭದಲ್ಲಿ ಭೂ ದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ, ಸಹಾಯಕ ನಿರ್ದೇಶಕ ನಿಸಾರ್ ಅಹಮದ್, ಉಪತಹಶಿಲ್ದಾರ್ ನರೇಂದ್ರನಾಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ದರ್ಖಾಸು ಜಮೀನು ಸೇರಿದಂತೆ ಪ್ಲೋಟಿಂಗ್ ಆಗದ ಜಮೀನಿಗೆ ಸಂಬಂಧಿಸಿದಂತೆ ಸಾರ್ವಜನಿಕರು 1-5 ಗೆ ಅರ್ಜಿ ಕೊಟ್ಟು 5-6 ವರ್ಷಗಳೂ ಕಳೆದರೂ ಕಡತಗಳಿಗೆ ಇನ್ನು ಮುಕ್ತಿ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದರು.

1-5 ಪ್ಲೋಟಿಂಗ್ ಸಂಬಂಧಿಸಿದಂತೆ ಕಡತಗಳು ಬಂಟ್ವಾಳ ತಾಲೂಕು ತಹಸೀಲ್ದಾರರಿಂದ ಮಂಗಳೂರು ಸಹಾಯಕ ಆಯುಕ್ತರ ಕಛೇರಿಗೆ 10-20 ಬಾರಿ ಅಲೆದಾಡುತ್ತಿದ್ದು, ಅಧಿಕಾರಿಗಳು ಮಾತ್ರ ಕಡತಗಳಿಗೆ ಮುಕ್ತಿ ನೀಡದಿರುವುದು ಸಾರ್ವಜನಿಕ ವಲಯದಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿಯವರಿಗೂ ಈ ಬಗ್ಗೆ ದೂರುಗಳು ಹೋಗಿತ್ತು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

 

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page