July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನನ್ನನ್ನು ಯಾರೂ ಅಪಹರಿಸಿಲ್ಲ, ಸ್ವ ಇಚ್ಛೆಯಿಂದ ಅಕ್ರಮ್ ಜೊತೆ ಹೋಗಿದ್ದೇನೆ – ಜೀನ ಮೆರಿಲ್

ಉಡುಪಿ ನಗರ ಠಾಣೆಯ ಹುಡುಗಿ ಅಪಹರಣ ಪ್ರಕರಣದಲ್ಲಿ, ಹುಡುಗಿಯ ಪೋಷಕರು ಹೈಕೋರ್ಟ್ ನಲ್ಲಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆದಿದ್ದು, ಈ ವಿಚಾರಣೆಗೆ ಹುಡುಗಿಯಾದ ಜೀನ ಮೆರಿಲ್ ಮತ್ತು ಅಕ್ರಮ್ ತನ್ನ ವಕೀಲ ಮುಖೇನ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ನ್ಯಾಯಾಲಯದ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತನ್ನನ್ನು ಯಾರೂ ಕೂಡ ಅಪಹರಿಸಿರುವುದಿಲ್ಲ, ನಾನು ಸ್ವ- ಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ತಿಳಿಸಿರುತ್ತಾಳೆ. ಹುಡುಗಿಯ ತಾಯಿ ಹುಡುಗಿ ಜೊತೆ ಮಾತನಾಡಬೇಕು ಎಂದು ತಿಳಿಸಿದಾಗ, ನ್ಯಾಯಾಧೀಶರು ಸ್ವತಹ ತಮ್ಮ ಕೊಠಡಿಯಲ್ಲಿ ಹುಡುಗಿ ಜೊತೆ ತಾಯಿಯನ್ನು ಮಾತನಾಡಿಸಿರುತ್ತಾರೆ.

ನಂತರ ವಿಚಾರಣೆಯಲ್ಲಿ ತಾಯಿ ಮಗಳನ್ನು ತನ್ನ ಜೊತೆ ಕಳಿಸುವಂತೆ ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದು, ಇದಕ್ಕೆ ಹುಡುಗಿಯು ಒಪ್ಪಿರುವುದಿಲ್ಲ. ಅಲ್ಲದೇ ತಾನು ಅಕ್ರಮ್ ಜೊತೆ ಎಪ್ರಿಲ್ 19ರಂದು ರಿಜಿಸ್ಟರ್ ಮದುವೆ ಮಾಡಿಕೊಳ್ಳುತ್ತಿದ್ದು, ಮದುವೆ ನಂತರ ತಾಯಿಯನ್ನು ಭೇಟಿಯಾಗುವುದಾಗಿ ತಿಳಿಸುತ್ತಾಳೆ. ಅಲ್ಲದೇ ತಾಯಿಯೊಂದಿಗೆ ಕೂಡ ಉತ್ತಮ ಬಾಂಧವ್ಯದೊಂದಿಗೆ ಇರುವುದಾಗಿ ತಿಳಿಸಿರುತ್ತಾಳೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಎಪ್ರಿಲ್ 22 ಕ್ಕೆ ನಿಗದಿಪಡಿಸಿದ್ದು, ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿರುತ್ತದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page