April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಾರಿಟಿ ಟ್ರೋಫಿ 2025 – ಪಾಲಡ್ಕಾ ವಿನ್ನರ್ – ಪೆರ್ಮನೂರ್ ರನ್ನರ್

ವೆಲ್ಫೇರ್ ಏಸೋಸಿಯೇಷನ್ ರಾಣಿಪುರ ಇವರ ಮುಂದಾಳತ್ವದಲ್ಲಿ, ಪಾದರ್ ಮುಲ್ಲರ್ ಹೋಮಿಯೋಪತಿ ಮೈದಾನ ದೇರಳಕಟ್ಟೆ ಇಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೈಂಟ್ ಲೋಯೋಲಾ ಚರ್ಚ್ ಪಾಲಡ್ಕಾ ವಿನ್ನರ್ ಆಗಿದ್ದು, ಸೈಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಅಲಂಕರಿಸಿದೆ.

ಎಪ್ರಿಲ್ 5 ಮತ್ತು 6ರಂದು  ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾಟವು ನಡೆಯಿತು. ಬಡಬಗ್ಗರ ದೀನ ದಲಿತರಿಗೆ ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ ಉದ್ದೇಶದಿಂದ ರಾಣಿಪುರ ವೆಲ್ಪೇರ್ ಏಸೋಸಿಯೇಷನ್ ಈ ಚಾರಿಟಿ ಟ್ರೋಫಿ ಪಂದ್ಯಾಟವನ್ನು ಆಯೋಜಿಸಿತ್ತು. ಎಪ್ರಿಲ್ 5ರಂದು ಬೆಳಿಗ್ಗೆ ಫಾದರ್ ಮುಲ್ಲರ್ ಹೋಮಿಯೋಪತಿ ಆಸ್ಪತ್ರೆ ಇದರ ಆಡಳಿತ ಅಧಿಕಾರಿ ವಂದನೀಯ ಫಾದರ್ ಫೌಸ್ಟಿನ್ ಲೂಕಸ್ ಲೋಬೊರವರು ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂಧರ್ಭದಲ್ಲಿ ಸ್ಥಾಪಕ ಅಧ್ಯಕ್ಷ ಜೋಸೆಫ್ ಪಾವ್ಲ್ ಲೋಬೋರವರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ಬಹಳ ಅಚ್ಚುಕಟ್ಟಾಗಿ ನಡೆದ ಪಂದ್ಯಾಟಗಳಲ್ಲಿ ಮೂಡಬಿದ್ರೆಯ ಪಾಲಡ್ಕ ತಂಡ ಹಾಗೂ ಪೆರ್ಮನೂರಿನ ಸೆಬಾಸ್ಟಿಯನ್ ತಂಡವು ಫೈನಲ್ ಸೆಣಾಸಾಟ ನಡೆಸಿ ಪಾಲಡ್ಕ ತಂಡ ವಿಜಯಿಯಾಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವೆಲ್ಫೇರ್ ಎಸೋಸಿಯೇಷನ್ ಅಧ್ಯಕ್ಷ ಫೆಲಿಕ್ಷ್ ಮೊಂತೇರೋ ವಹಿಸಿಕೊಂಡರು ಮುಖ್ಯ ಅಥಿತಿಗಳಾಗಿ, ಸಾಹಿತಿ ಹಾಗೂ ಪೋಕಸ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಯುವ ನಾಯಕ ವಿನೋದ್ ಪಿಂಟೋ ತಾಕೋಡೆ, ರೂಪೇಶ್ ನಿಲಿಮಾ ದಂಪತಿಗಳು ರಾಣಿಪುರ, ಗ್ರೇಸಿ ಮೊಂತೇರೊ ರಾಣಿಪುರ, ಚಾರಿಟಿ ಟ್ರೋಫಿ ಸಂಚಾಲಕ ಜೀವನ್ ಪೆರಾವೊ, ಕೋಶಾಧಿಕಾರಿ ಟೈಟಸ್ ಡಿಸೋಜ, ಕಾರ್ಯದರ್ಶಿ ಆಲ್ವಿನ್ ಡಿಸೋಜ ಇವರೆಲ್ಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಅಧ್ಯಕ್ಷ ಫೆಲಿಕ್ಸ್ ಮೊಂತೇರೊ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸರಿ ಸುಮಾರು 20 ಬಡ ರೋಗಿಗಳಿಗೆ ಹಾಗೂ ಅಶಕ್ತರಿಗೆ ಸಹಾಯ ಹಸ್ತವನ್ನು ಚೆಕ್ ಗಳ ಮುಕಾಂತರ ನೀಡಲಾಯಿತು.  ಮುಖ್ಯ ಅಥಿತಿಗಳಾಗಿ ಮಾತನಾಡಿದ ವಿನೋದ್ ಪಿಂಟೋ ತಾಕೋಡೆಯವರು, ಕ್ರಿಶ್ಚಿಯಿನ್ನರ ಈ ತಪಸ್ಸು ಕಾಲದಲ್ಲಿ ಬಡವರಿಗೆ ದೀನದಲಿತರಿಗೆ ಸಹಾಯ ಮಾಡಿ ಅವರಲ್ಲಿ ದೇವರನ್ನು ಕಾಣುವ ರಾಣಿಪುರ ವೆಲ್ಫೇರ್ ಸಂಘಟನೆಯ ಕಾರ್ಯವನ್ನು ಶ್ಲಾಗಿಸಿದರು ಇಂಥಹ ಸಂಘಟನೆಗಳು ಉತ್ತಮ ಹಾಗೂ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಇಂಥಹ ಪಂದ್ಯಾಟಗಳು ಹಾಗೂ ಚಾರಿಟಿ ವರ್ಕ್ ಮುಂದಿನ ವರುಷಗಳಲ್ಲಿ ಇನ್ನು ದೊಡ್ಡ ಮಟ್ಟದಲ್ಲಿ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು ಕಾರ್ಯದರ್ಶಿ ಆಲ್ವಿನ್ ಡಿಸೋಜ ವಂದಿಸಿದರು. ಡೆಲನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.

ಗೆದ್ದ  ತಂಡಗಳ ವಿವರ :-

ವಿನ್ನರ್  : ಸೈಂಟ್ ಲೋಯೋಲಾ ಚರ್ಚ್ ಪಾಲಡ್ಕ – ಟ್ರೋಫಿ ಹಾಗೂ 30 ಸಾವಿರ ನಗದು

ರನ್ನರ್ : ಸೈಂಟ್ ಸೆಬೇಸ್ಟಿಯನ್ ಚರ್ಚ್ ಪೆರ್ಮನೂರ್ – ಟ್ರೋಫಿ ಹಾಗೂ 20 ಸಾವಿರ ನಗದು

ತೃತೀಯ : MYC ಮರೀಲ್ ಹಾಗೂ ಪೆರ್ಮನೂರ್ ಸ್ಟೋರ್ಟ್ಸ್ ಕ್ಲಬ್

ವೈಯುಕ್ತಿಕ ಬಹುಮಾನಗಳು :-

ಮ್ಯಾನ್ ಆಪ್  ದಿ  ಮ್ಯಾಚ್ : ನಿತಿನ್  ಪಾಲಡ್ಕ

ಮ್ಯಾನ್ ಆಫ್ ದಿ ಸೀರಿಸ್ ಮತ್ತು ಬೆಸ್ಟ್ ಬ್ಯಾಟ್ಸ್ಮನ್ : ಗ್ಲೆನ್ ಸನ್ ಪಾಲಡ್ಕ

ಬೆಸ್ಟ್ ಬೌವ್ಲರ್ : ಕೊನ್ವೆಲ್  ಪೆರ್ಮನೂರ್

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page