September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ – ಜೂನ್ 2ರಿಂದಲೇ ತರಗತಿಗಳು ಆರಂಭ

ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಎಪ್ರಿಲ್ 9ರಂದು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ.

ವೇಳಾಪಟ್ಟಿ ಪ್ರಕಾರ ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆಪ್ಟೆಂಬರ್ 21ರವರೆಗೆ ಹಾಗೂ ಎರಡನೇ ಅವಧಿ ಅಕ್ಟೋಬರ್ 8ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page