September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೊರರಾಜ್ಯದ ಯುವತಿ ಮೇಲೆ ಪರಿಚಯಿಸ್ಥರಿಂದಲೇ ಗ್ಯಾಂಗ್ ರೇಪ್ ಶಂಕೆ – ಮೂವರ ಬಂಧನ

ಏಪ್ರಿಲ್ 16 ಹಾಗೂ 17ರ ಮದ್ಯದ ರಾತ್ರಿಯಲ್ಲಿ ಹೊರರಾಜ್ಯದ ಯುವತಿ ಮೇಲೆ ನಡೆದಿದೆ ಎನ್ನಲಾದ ಗ್ಯಾಂಗ್ ರೇಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಮಾತನಾಡಿ ಒಂದು ಹುಡುಗಿ ಮೇಲೆ ಹಲ್ಲೆ ಮಾಡಿದ್ದಾರೆ, ಅವಳು ಕೂಗಾಡುತ್ತಿದ್ದಾಳೆಂದು ರಾತ್ರಿ ಸುಮಾರು 1.30ಕ್ಕೆ 112 ಸಂಖ್ಯೆಗೆ ಕರೆ ಬಂದಿದೆ. ಆಕೆಗೆ ಹಲ್ಲೆ ಮಾಡಿದ್ದಾರೆ ಎಂಬ ದೂರು ಸ್ವೀಕೃತವಾಗಿದೆ. ತಕ್ಷಣವೇ ಹೊಯ್ಸಳ ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಅವಳು ಮಾತನಾಡುವ ಸ್ಥಿತಿಯಲ್ಲಿರದ ಕಾರಣ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್ (38), ಮಣಿ ಮತ್ತು ಕುಂಪಲದ ಮಿಥುನ್ (30) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಸಂತ್ರೆಸ್ತೆ ನೀಡಿದ ಹೇಳಿಕೆ ಪ್ರಕಾರ ನಿನ್ನೆ ರಾತ್ರಿ ಯಾರೋ ಅವಳಿಗೆ ಮದ್ಯಪಾನ ಮಾಡಿಸಿದ್ದಾರೆ. ಆನಂತರ ಪ್ರಜ್ಞೆ ತಪ್ಪಿದ್ದು, ಕಾರಲ್ಲಿ ಮೂರು ಜನ ಇದ್ದಿದ್ದಾಗಿ ಯುವತಿ ತಿಳಿಸಿದ್ದಾಳೆ. ಪ್ರಜ್ಞೆ ಬಂದ ನಂತರ ಅವಳ ಒಳಉಡುಪು ಇರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಪ್ರಜ್ಞೆ ಬಂದು ಅವಳು ಕೂಗಾಡಲು ಶುರು ಮಾಡಿದಾಗ ಅವರು ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಆ ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ ಎನ್ನಲಾಗಿದೆ. ಮಂಗಳೂರಿನಲ್ಲಿ ಪರಿಚಯವಾದ ಆಟೋ ಚಾಲಕ ಮತ್ತು ಆತನ ಸ್ನೇಹಿತರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ಪೊಲೀಸರ ಮುಂದೆ ಹೇಳಿದ್ದಾರೆ.

ಆದರೆ, ವೈದ್ಯಕೀಯ ವರದಿ ಬಂದ ಬಳಿಕ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆಯೋ ಅಥವಾ ಇಲ್ಲವೋ ಎಂಬುವುದು ತಿಳಿಯಲಿದೆ. ಉಳ್ಳಾಲ ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ. ಯುವತಿಯು ರಾತ್ರಿ ಮನೆಯೊಂದರ ಬಾಗಿಲು ಬಡೆದಿದ್ದು ಮನೆಯವರು ನೋಡಿದಾಗ ಆಕೆ ಆರೆ ಪ್ರಜ್ಞಾವಸ್ಥೆಯಲ್ಲಿದ್ದಳು. ಸರಿಯಾಗಿ ನಿಲ್ಲಲು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಳು. ಮನೆ ಮಂದಿ ನೀರು ಕೊಟ್ಟ ಬಳಿಕ ಆಕೆ ಮಾತನಾಡುವಷ್ಟು ಶಕ್ತಳಾಗಿದ್ದಾಳೆ. ತನ್ನನ್ನು ರಿಕ್ಷಾದಲ್ಲಿ ತಂದು ನಿರ್ಜನ ಸ್ಥಳದಲ್ಲಿ ಬಿಟ್ಟಿದ್ದಾರೆ ಎಂದು ಆಕೆ ತಿಳಿಸಿದ್ದಾರೆ – ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಯುವತಿಯ ಮೈ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಆಕೆ ಧರಿಸಿದ್ದ ವಸ್ತ್ರವು ಅಸ್ತವೆಸ್ತವಾಗಿತ್ತು. ಜೊತೆಗೆ ಗಾಯದ ಗುರುತು ಮಾಡಿದ್ದು ಸಾಮೂಹಿಕ ಅತ್ಯಾಚಾರದ ಶಂಕೆಯು ವ್ಯಕ್ತವಾಗಿದೆ. ಅನಂತರ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿನ ಹೊಳೆ ಬದಿಗೆ ನಿರ್ಜನಾ ಪ್ರದೇಶಕ್ಕೆ ದಿನನಿತ್ಯ ಅಮಲು ವ್ಯಸನಿಗಳು ಹಾಗೂ ಗಾಂಜಾ ಸೇವಿಸುವವರು ಬರುತ್ತಿರುತ್ತಾರೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಲ್ಲಿ ಇಂತಹ ಘಟನೆಗಳು ನಡೆಯುವುದು ತಪ್ಪುತ್ತದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page