August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಳೇ ಆರೋಪಿಯಿಂದ ಪರಂಗಿಪೇಟೆಯಲ್ಲಿ ಬೀಗ ಮುರಿದು ಕಳ್ಳತನ – ಆರೋಪಿ ನಝೀರ್‌ ಮಹಮ್ಮದ್ ಅಂದರ್

2024ರಲ್ಲಿ ಕಣ್ಣೂರು ಟಿ.ವಿ.ಎಸ್‌. ಶೊರೂಮ್‌ ನ ಗಾಜು ಒಡೆದು ಹಣ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಹಳೇ ಆರೋಪಿ 26 ವರ್ಷ ಪ್ರಾಯದ ನಝೀರ್‌ ಮಹಮ್ಮದ್‌ ಕಣ್ಣೂರು, ಇವನು ದಿನಾಂಕ ಎಪ್ರಿಲ್ 11/12ರ ಮಧ್ಯರಾತ್ರಿ ಪುದು ಗ್ರಾಮದ ಪರಂಗಿಪೇಟೆಯಲ್ಲಿರುವ ವಿಶ್ವಾಸ ಸಿಟಿ ಸೆಂಟರ್ ನ ವೈಟ್ ಲೈನ್ ಕಿಡ್ಸ್ ವರ್ಲ್ಡ್ ಬಟ್ಟೆ ಅಂಗಡಿಗೆ ನುಗ್ಗಿ ಕಳವುಗೈದ ಘಟನೆಗೆ‌ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 42/2025 ಕಲಂ: 331(4) 305 ಬಿ.ಎನ್‌.ಎಸ್. ರಂತೆ ಪ್ರಕರಣ ದಾಖಲಾಗಿರುತ್ತದೆ.

ಇವನನ್ನು ಎಪ್ರಿಲ್ 19ರಂದು ದಸ್ತಗಿರಿ ಮಾಡಿ, ಆತನಿಂದ ಕಳವುಗೈದ ನಗದಿನ ಪೈಕಿ   ರೂಪಾಯಿ 1,09,490/-ನಗದು ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ನ್ನು ಸ್ವಾಧೀನಪಡಿಸಲಾಗಿದೆ. ಬಂಟ್ವಾಳ‌ ಗ್ರಾಮಾಂತರ ಪೊಲೀಸ್‌ ಠಾಣಾ  ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ. ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಸದ್ರಿ ಪ್ರಕರಣದ‌ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page