July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೀಗ ಹಾಕಿದ ಮನೆಯಿಂದ ಚಿನ್ನಾಭರಣ ಹಾಗೂ ಹಣ ದರೋಡೆ – ಪ್ರಕರಣ ದಾಖಲು

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಕೊಲ್ಪೆದಬೈಲು, ಮಾಲಾಡಿ ಗ್ರಾಮ ಮತ್ತು ಅಂಚೆ, ಬೆಳ್ತಂಗಡಿಯಲ್ಲಿನ ವಸಂತಿ ಹೆಗ್ಡೆ ಇವರ ಮನೆಯ ಮುಂದಿನ ಬಾಗಿಲಿಗೆ ಹಾಕಿರುವ ಬೀಗದ ಕೊಂಡಿಯನ್ನು ಕಳ್ಳರು ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಕೋಣೆಯ ಕಪಾಟುಗಳಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ನಗದು ರೂಪಾಯಿ 30,000/- ಹಣವನ್ನು ಕಳ್ಳರು ಕಳವು ಮಾಡಿದ್ದಾರೆ.

58 ವರ್ಷದ ವಸಂತಿ ಹೆಗ್ಡೆಯವರು ತಮ್ಮ ಮಗ ಹಾಗೂ ಸೊಸೆ ಜೊತೆಗೆ ಎಪ್ರಿಲ್ 20ರಂದು ಮಧ್ಯಾಹ್ನ ಬೆಳ್ತಂಗಡಿಗೆ ಹೋಗಿದ್ದರು. ಸಂಜೆ ವಾಪಸ್ ಮನೆಗೆ ಬರುವಾಗ ಕಳ್ಳತನ ಆದದ್ದು ಬೆಳಕಿಗೆ ಬಂದಿದೆ. ಕಳವಾದ ಚಿನ್ನಾಭರಣಗಳ ಒಟ್ಟು ತೂಕ 160.5 ಗ್ರಾಂ ಆಗಿದ್ದು ಇದರ ಮೌಲ್ಯ ರೂಪಾಯಿ 13,72,000/- ಆಗಿರುತ್ತದೆ. ನಗದು ಸೇರಿ ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂಪಾಯಿ 14,02,000/- ಆಗಿರುತ್ತದೆ. ವಸಂತಿ ಶೆಟ್ಟಿ ನೀಡಿದ ದೂರಿನಂತೆ, ಪುಂಜಾಲಕಟ್ಟೆ ಠಾಣಾ ಅ.ಕ್ರ 25/2025 ಕಲಂ: 331(3), 305   BNS- 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page