September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕಿನ ಇತಿಹಾಸದಲ್ಲೇ ಮೊದಲ ಬಾರಿಗೆ ಎಪ್ರಿಲ್ 25 ರಿಂದ 27ರ ತನಕ ಅಂತರಾಷ್ಟ್ರೀಯ ಡಾಡ್ಜ್ ಬಾಲ್ ಪಂದ್ಯಾಟ

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇಲ್ಲಿ ಆಯೋಜನೆ

ಸರ್ವರನ್ನೂ ಸ್ವಾಗತಿಸಿದ ಬಾಲವಿಕಾಸ ಪರಿವಾರ – ಪತ್ರಿಕಾ ಗೋಷ್ಠಿ

ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ 2025 ಹಾಗೂ ಮೂರನೇ ರಾಜ್ಯಮಟ್ಟದ ಕರ್ನಾಟಕ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ ಇದೇ ಎಪ್ರಿಲ್ 25ರಿಂದ 27ರ ತನಕ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇಲ್ಲಿಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ 2025 ಇದರ ಸಂಘಟನಾ ಕಾರ್ಯದರ್ಶಿ ವಿಜೇತ್ ಕುಮಾರ್ ಮಾತನಾಡಿ ಎಪ್ರಿಲ್ 25 ರಂದು ರಾಜ್ಯಮಟ್ಟದ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. 26 ಮತ್ತು 27 ರಂದು ರಾಷ್ಟ್ರಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದ ಡಾಡ್ಜ್‌ಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಭಾರತದಲ್ಲೇ ಪ್ರಪ್ರಥಮ ಬಾರಿಗೆ ನಡೆಯುವ ಈ ಚಾಂಪಿಯನ್ ಶಿಪ್‌ನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ದಿ. ಉದಯ್ ಚೌಟ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಜೊತೆಗೆ ಈ ಚಾಂಪಿಯನ್ ಶಿಪ್ ನ ಜೊತೆಯಲ್ಲಿ ಆಹಾರ ಪ್ರಿಯರಿಗೆ ಫುಡ್‌ಫೆಸ್ಟ್ ಅನ್ನು ಆಯೋಜನೆ ಮಾಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸುವಂತೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಡಾಡ್ಜ್‌ ಬಾಲ್ ಚಾಂಪಿಯನ್‌ಶಿಪ್ ನ ಸಂಚಾಲಕರು ಸಚಿನ್ ಎ.ಎಸ್., ಮಾಣಿ ಬಾಲವಿಕಾಸ ಎಜ್ಯುಕೇಶನ್ ಟ್ರಸ್ಟ್ ಇದರ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಶಿಕ್ಷಕಿ ಸುಪ್ರಿಯಾ ಡಿ. ಉಪಸ್ಥಿತರಿದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page