July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ. ಭಯೋತ್ಪಾದಕರನ್ನು ನಿರ್ಮೂಲನೆ ಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page